ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ Fetal killing case ಬಗೆದಷ್ಟೂ ಆಳವಾಗುತ್ತಿದ್ದು, ಪೊಲೀಸರ ಬಂಧನದಲ್ಲಿರುವ ಹೆಡ್ ನರ್ಸ್ ಮಂಜುಳಾ ಎಂಬಾಕೆ ತನಿಖೆಯಲ್ಲಿ ಬಾಯಿ ಬಿಟ್ಟಿರುವ ಅಂಶಗಳು ಎಂತಹವನ್ನೂ ಬೆಚ್ಚಿ ಬೀಳಿಸುವಂತಿದೆ.
ಹೌದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಬಂಧನದಲ್ಲಿರುವ ಹೆಡ್ ನರ್ಸ್ ಮಂಜುಳಾ ತನಿಖೆ ವೇಳೆ ಹಲವು ಘೋರ ವಿಚಾರಗಳನ್ನು ಬಾಯಿ ಬಿಟ್ಟಿದ್ದು, ಬೆಚ್ಚಿ ಬೀಳಿಸುವಂತಿದೆ.

Also read: ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ
ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್’ನಲ್ಲಿ ಸುತ್ತಿ ನಿಸಾರ್’ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ ಎಂಬ ಘೋರ ಮಾಹಿತಿಯನ್ನು ಬಿಚ್ಚಿಟ್ಟಿದ್ದಾಳೆ ಎಂದು ವರದಿಯಾಗಿದೆ.

ಭ್ರೂಣಗಳನ್ನು ನಿಸಾರ್ ನದಿಗೆ ಎಸೆಯುತ್ತಿದ್ದ. ಆದರೆ, ಯಾವ ಜಾಗದಲ್ಲಿ ಹಾಕುತ್ತಿದ್ದ ಎಂಬ ಮಾಹಿತಿ ನನಗೆ ತಿಳಿದಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ಬಿಸಾಕುವ ಕೆಲಸ ಮಾಡುತ್ತಿದ್ದ ಎಂದಿದ್ದಾಳೆ.
ಪ್ರಕರಣದ ತನಿಖೆ ಮುಂದುವರೆದಿದ್ದು, ಈ ಕೇಸ್ ಬಗೆದಷ್ಟೂ ಆಳವಾಗುತ್ತಿದೆ.









Discussion about this post