ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಲವ್ ಯೂ ರಚ್ಚು ಚಿತ್ರೀಕರಣದ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಕುರಿತಂತೆ ಆದೇಶಿಸಿರುವ ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು, ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಸೂಚಿಸಿದ್ದಾರೆ.


ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚಿತ್ರದ ನಿರ್ದೇಶಕ ಶಂಕರ್ ರಾಜ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಮತ್ತು ಕ್ರೇನ್ ಆಪರೇಟರ್ ಮಹಾದೇವ್ ಎಂಬುವವರನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ರಚಿತಾ ರಾಮ್ ಮತ್ತು ಅಜಯ್ ರಾವ್ ಅಭಿನಯಿಸುತ್ತಿದ್ದ ಲವ್ ಯೂ ರಚ್ಚು ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ವಿದ್ಯುತ್ ತಗುಲಿ ಫೈಟರ್ ವಿವೇಕ್ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















