ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ಟೇಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದರು.
ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿರುವ ಅವರು, ಈ ಎಲ್ಲಾ ಹುದ್ದೆಗಳನ್ನು ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದ್ದು, ಅಕ್ಟೋಬರ್ ತಿಂಗಳ 31 ನೆ ತಾರೀಖು ಅರ್ಜಿಗಳನ್ನು ಆನ್ಲೈನ್ ನಲ್ಲಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ ಎಂದರು.

Also read: ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣ: ಸಂಸದ ರಾಘವೇಂದ್ರ
ನೇಮಕಾತಿ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ನಡೆಯಲಿದ್ದು, ಅಭ್ಯರ್ಥಿಗಳು, ಯಾವುದೇ ಅಕ್ರಮಗಳ ಅಥವಾ ವಾಮಮಾರ್ಗದ ಮೂಲಕ ಹುದ್ದೆಗಳನ್ನು ಪಡೆಯಲು ಯತ್ನಿಸಿದರೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post