ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ Punya Koti Project ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ Actor Sudeep ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ Minister Prabhu Chouhan ತಿಳಿಸಿದ್ದಾರೆ.
ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

Also read: ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ
ರಾಜ್ಯದಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ, 100 ಸರ್ಕಾರಿ ಗೋಶಾಲೆಗಳು, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋಶಾಲೆ, ಸಂಚಾರಿ ಪಶು ಚಿಕಿತ್ಸಾ ವಾಹನಗಳು, ಪಶು ಜಿಲ್ಲಾಸ್ಪತ್ರೆಗಳ ನಿರ್ಮಾಣ, ಸ್ಪೇಷಲ್, ಸೂಪರ್ ಸ್ಪೇಷಾಲಿಟಿ ಹಾಗೂ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳು, 100 ಪಶು ಚಿಕಿತ್ಸಾಲಯಗಳು, 400 ಪಶು ವೈದ್ಯರ ನೇಮಕಾತಿ, 250 ಕಿರಿಯ ಪಶು ವೈದ್ಯಕೀಯ ಸಹಾಯಕರ ನೇಮಕಾತಿ, ಪುಣ್ಯಕೋಟಿ ದತ್ತು ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ ಕಿಚ್ಚ ಸುದೀಪ್ ರಾಯಭಾರಿಯಾಗಲು ಒಪ್ಪಿರುವುದು ಗೋಸೇವೆಯಲ್ಲಿ ತೋಡಗಿರುವ ನಮಗೆ ಆನೆಬಲ ಬಂದಂತಾಗಿದೆ ಎಂದು ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post