ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಯಾದಗಿರಿ ಜಿಲ್ಲೆಯ ಸೈದಾಪುರ ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರ ಕರಬಸಯ್ಯ ದಂಡಗಿಮಠ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡಿದ ಮನವಿ ಮೇರೆಗೆ ಚಿಕಿತ್ಸೆ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ರುದ್ರಯ್ಯ ಅವರಿಗೆ ಆರ್ಥಿಕ ನೆರವು ನೀಡುವಂತೆ ಯಾದಗಿರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರುದ್ರಯ್ಯ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆಗಳು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.
ಆರ್ಥಿಕ ನೆರವು ಕೋರಿ ಶಿವಾನಂದ ತಗಡೂರು ಸಿಎಂ ಗೆ ಮನವಿ ಪತ್ರ ಸಲ್ಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post