ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ Udyan Express Train ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಇಂದು ನಡೆದಿದೆ.
ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 3ರಲ್ಲಿ 5.45 ಗಂಟೆಗೆ ಮೆಜೆಸ್ಟಿಕ್ ಬಳಿಯ
ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ಬಂದು ನಿಲ್ಲಿಸಲಾಗಿತ್ತು. ಸುಮಾರು 7.10ಗಂಟೆಗೆ ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತ ಸ್ಥಳೀಯ ಅಧಿಕಾರಿಗಳು ಅಗ್ನಿಶಾಮಕ ದಳಕ್ಕೆ ಸಂದೇಶ ನೀಡಿದ ಹಿನ್ನೆಲೆ 7.35 ಸುಮಾರಿಗೆ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ರೈಲಿನ ಎರಡು ಕೋಚ್‌ಗಳಿಗೆ ಬೆಂಕಿ ಆವರಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಈ ಸಂದರ್ಭದಲ್ಲಿ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಬಳಿಕ ಘಟನೆಗೆ ಕಾರಣ ಏನು ಎಂಬುವುದು ಗೊತ್ತಾಗಲಿದೆ, ಪ್ರಾಥಮಿಕ ಮಾಹಿತಿ ಪ್ರಕಾರ ತಾಂತ್ರಿಕ ದೋಷವೇ ಬೆಂಕಿ ಅನಾಹುತಕ್ಕೆ ಕಾಕಣ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯಲತಾ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post