ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರಲ್ಲಿ ಇಂದು ಅಗ್ನಿದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.
ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ಮಹಡಿಯಲ್ಲಿ ಹಲವಾರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಂಗ್ರಹಿಸಲಾಗಿದ್ದ ‘ಹುಕ್ಕಾ ಬಾರ್ ಮತ್ತು ಕೆಫೆ’ಯಲ್ಲಿ ಮಧ್ಯಾಹ್ನದ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬರು ಟೆರೇಸ್‌ನಿಂದ ಜಿಗಿದಿದ್ದಾರೆ. ಅವರು ಮತ್ತು ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಲಿಂಡರ್ ಸ್ಟೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕಟ್ಟಡದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಜನರು ತಕ್ಷಣ ಎಚ್ಚೆತ್ತು ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಘಟನಾ ಸಂದರ್ಭದಲ್ಲಿ ಕೆಫೆಯಲ್ಲಿ ಗ್ರಾಹಕರು ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.
Also read: ಚೀನಾ ಏಷ್ಯನ್ ಗೇಮ್ಸ್: ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಹೆಮ್ಮೆಯ ಸಂಗತಿ: ಸಿಎಂ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















