ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್.ಐ.ಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. . ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಎನ್.ಐ.ಎ ಗೆ ಹಸ್ತಾಂತರ ಮಾಡಲಾಗುವುದು ಎಂದರು. ಅನೌಪಚಾರಿಕವಾಗಿ ಎನ್.ಐ.ಎ ಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಫಾಜಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ತಿಳಿಸಿದರು.
Also read: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ 14ರ ಬಾಲೆ ಅನಾಹತ್ ಸಿಂಗ್
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post