ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸ್ವತಃ ಭಾಸ್ಕರ್ ರಾವ್ ಅವರೇ ಪತ್ರಿಕೆಯೊಂದರ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆ ಎನ್ನಲಾಗಿದೆ.
ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಅವರು ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆಎಳೆದಿರುವ ಅವರು, ಟ್ರಾವೆಲ್ ಮಾಡಲು, ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಬಯಸಿದ್ದೇನೆಂದು ಹೇಳಿದ್ದಾರೆ.
1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post