ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಾರ್ವಜನಿಕ ಜೀವನದಿಂದ ಕ್ರಮೇಣ ಹಿಂದೆ ಸರಿಯುವ ಮೂಲಕ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ S M Krishna ಹೇಳಿದ್ದಾರೆ.
ನಗರದ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಗೀಗ 90 ವರ್ಷ, 90ರಲ್ಲಿ 50ರ ವಯೋಮಾನದವರ ರೀತಿ ನಟನೆ ಮಾಡಲು ಆಗುವುದಿಲ್ಲ. ತಮಗೆ ವಯಸ್ಸಿನ ಬಗ್ಗೆ ಅರಿವಿರಬೇಕು. ಈ ಹಿನ್ನೆಲೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಕ್ಷ ನಿಮ್ಮನ್ನು ಕಡೆಗಣಿಸುತ್ತಿರುವ ಹಿನ್ನೆಲೆಯಲ್ಲಿ ನಿವೃತ್ತಿ ಘೋಷಿಸುತ್ತಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಾವೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿರುವಾಗ ಬಿಜೆಪಿ ತನ್ನನ್ನು ಕಡೆಗಣಿಸಿದ ಎಂಬ ಪ್ರಶ್ನೆಯೇ ಬರುವುದಿಲ್ಲ. ಹಾಗೂ ತಮ್ಮ ನಿವೃತ್ತಿ ನಿರ್ಧಾರದ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡುವ ಅವಶ್ಯಕತೆ ಇಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post