ಕಲ್ಪ ಮೀಡಿಯಾ ಹೌಸ್
ಬೆಂಗಳೂರು : ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಡಿಸ್ಚರ್ಜ್ ಆಗಿ ಮನೆಗೆ ತೆರಳಿದ್ದಾರೆ.
ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದು ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕರನ್ನು ಭೇಟಿ ಮಾಡುವುದಿಲ್ಲ :
ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post