ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ, ಬಿಜೆಪಿ ಹಿರಿಯ ನಾಯಕ ಡಿ.ಬಿ. ಚಂದ್ರೇಗೌಡ (87) DBChandregowda ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನ.8ರ ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮೂರು ಬಾರಿ ಸಂಸದರಾಗಿ, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡರು, ರಾಜ್ಯಸಭಾ ಸದಸ್ಯರಾಗಿ, ಸ್ಪೀಕರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಕಾಂಗ್ರೆಸ್ ಕಟ್ಟರ್ ನಾಯಕರಾಗಿದ್ದ ಚಂದ್ರೇಗೌಡರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸೇರಿಕೊಂಡು ಸಂಸದರಾಗಿದ್ದರು.
ಡಿ.ಬಿ. ಚಂದ್ರೇಗೌಡರ ಅಪರೂಪದ ಚಿತ್ರಗಳು:
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post