ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ತಮ್ಮ ಅಪಾರ ಬೆಂಬಲಿಗರೊಂದಿಗೆ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಧ್ವಜ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಿದ್ದರಾಜು, ಕೊಪ್ಪಳದ ಸಂಸದ ಕರಡಿ ಸಂಗಣ್ಣ, ದೊಡ್ಡಣಗೌಡ ಪಾಟೀಲರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post