ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ.
ಅವರು ನಟಿಸಿದ್ದ ಪೃಥ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯ ವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ ಎಂದು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
–
Discussion about this post