ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಸೂಚನೆ ನೀಡಿದರು.
ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿದರು.

Also read: ಬೈಕ್- ಲಾರಿ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ. ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡುವಂತೆ ಸೂಚಿಸಿದರು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಲು ಸೂಚಿಸಿದರು.

ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸಚಿವರುಗಳಾದ ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಬೋಸ್ ರಾಜು, ರಹೀಂ ಖಾನ್, ಡಿ.ಸುಧಾಕರ್ ಜತೆಗೆ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಆರ್ಥಿಕ ಸಲಹೆಗಾರ ಬಸವರಾಜ ರಾಯ ರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸಭೆಯಲ್ಲಿ ಭಾಗಿಯಾದರು.
ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post