ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ #Dingaleshwara Swamiji ಲೋಕಸಭಾ ಚುನಾವಣಾ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದ್ದು, ಇದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಂಸದ ಪ್ರಹ್ಲಾದ್ ಜೋಶಿ #Prahlad Joshi ಅವರಿಗೆ ಕಂಟಕವಾಗಿದೆ ಎಂದು ವರದಿಯಾಗಿದೆ.
ಬೆಂಗಳೂರು ಅರಮನೆ ಮೈದಾನದ ರಸ್ತೆಯಲ್ಲಿರುವ ಅಖಿಲ ಭಾರತ ವೀರಶೈವ ಮಹಾಸಭಾ ಸಭಾಂಗಣದಲ್ಲಿ ಸಮುದಾಯದ ಸ್ವಾಮೀಜಿ ಹಾಗೂ ಮುಖಂಡರ ಜೊತೆಗೆ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲು ಒತ್ತಾಯವಿತ್ತು. ಕಳೆದ 16 ದಿನಗಳಿಂದ ನಮ್ಮ ನಿರ್ಧಾರ ಮಾಧ್ಯಮದ ಮೂಲಕ ಪ್ರಕಟ ಮಾಡುತ್ತಾ ಬಂದಿದ್ದೇವೆ. ಅಂತಿಮವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಘೋಷಿಸಿದ್ದಾರೆ.
Also read: ಚರ್ಮ ಕಪ್ಪಾಗಿದೆ ಎಂದು ಹೆತ್ತ 18 ತಿಂಗಳ ಮಗಳನ್ನೇ ವಿಷ ನೀಡಿ ಕೊಂದ ಪಾಪಿ ತಂದೆ
ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಧಾರವಾಡದ ಜನರು ಮಾತನಾಡುತ್ತಿದ್ದಾರೆ. ಇದು ಜನರಿಗೆ ದ್ರೋಹ ಮಾಡಿದಂತೆ ಆಗಲಿದೆ. ಧರ್ಮದಲ್ಲಿ ರಾಜಕೀಯ ಇರಬಾರದು. ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರು ಬಯಸಿದ್ದಾರೆ.
ನೊಂದ ಜನರು ನಮ್ಮ ಜೊತೆಗೆ ನೋವು ತೊಡಗಿಕೊಂಡರು. ಹೀಗಾಗಿ ಚುನಾವಣಾ ಸ್ಪರ್ಧೆಗೆ ಬಂದಿದ್ದೇನೆ. ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದಾರೆ.
ಜೋಶಿ ವಿರುದ್ಧ ಕಿಡಿ
ಪ್ರಹ್ಲಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಯಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ. ಜೋಶಿ ಆಡಳಿತ ವಿನಾಶಕಾರಿಯಾಗಿದೆ. ಇದಕ್ಕಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post