ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು.

Also read: ಬಸ್ ಅಡ್ಡಗಟ್ಟಿ ಮುಂಭಾಗದ ಗಾಜು ಒಡೆದ ಕಿಡಿಗೇಡಿ | ವಿಡಿಯೋ ವೈರಲ್
ಗಾಂಧಿ ಭಾರತ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ
1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಜನವರಿ 21ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಿ, ನಂತರ ಜೈಬಾಪು, ಜೈಭೀಮ, ಜೈ ಸಂವಿಧಾನ ಘೋಷವಾಕ್ಯದೊಂದಿಗೆ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು. ಭಾರತ ದೇಶ ಹಳ್ಳಿಗಳ ದೇಶ, ಹಳ್ಳಿಗಳ ಅಭಿವೃದ್ಧಿಗಳ ಮೂಲಕ ದೇಶ ಅಭಿವೃದ್ಧಿ ಸಾಧ್ಯವೆಂದು ಪ್ರತಿಪಾದಿಸಿದ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಜೀವ ತುಂಬಿದ್ದರು. ಗ್ರಾಮಗಳ ಸ್ವಾವಲಂಬನೆಯಿಂದ , ದೇಶ ಸ್ವಾವಲಂಬನೆಯಾಗುತ್ತದೆ. ಗುಡಿಕೈಗಾರಿಕೆಗಳು ಗ್ರಾಮಗಳ ಆರ್ಥಿಕತೆಯ ತಳಹದಿಯಾಗಿದ್ದು, ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಈ ನಿಟ್ಟಿನಲ್ಲಿ ಗಾಂಧಿ ಭಾರತ ವನ್ನು ನಿರ್ಮಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಪ್ರಯಾಗ್ ರಾಜ್ ನ ಕುಂಭಮೇಳದ #Kumbhamela in Prayagraj ಕಾಲ್ತುಳಿತದ ದುರಂತದಲ್ಲಿ ನಾಲ್ವರು ಕನ್ನಡಿಗರು ಮೃತಪಟ್ಟಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಮಾಹಿತಿ ದೃಢಪಟ್ಟಿದೆ ಹಾಗೂ ಗಾಯಗೊಂಡವರನ್ನು ಕರೆತರಲು ಏರ್ ಆ್ಯಂಬುಲೆನ್ಸ್ ವ್ಯವಸ್ಥೆಗೊಳಿಸಲಾಗಿದ್ದು, ಬೆಳಗಾವಿಯ ಹಿರಿಯ ಅಧಿಕಾರಿಗಳು ಅವರನ್ನು ಕರೆತರಲಿದ್ದಾರೆ. ಜಿಲ್ಲಾ ಸಚಿವರು ತೆಗೆದುಕೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post