ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಕೋರಮಂಗಲದಲ್ಲಿ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ #Gang Rape ಎಸಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಮಧ್ಯರಾತ್ರಿ ನಾಲ್ವರು ಕಿಡಿಗೇಡಿಗಳು ಈ ಪೈಶಾಚಿಕ ಕೃತ್ಯ ನಡೆದಿದ್ದು, ಶುಕ್ರವಾರ ಬೆಳಗ್ಗೆ ದೂರು ದಾಖಲಾಗಿದೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೊರಮಂಗಲ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಮೂಲದ ಅಜಿತ್, ವಿಶ್ವಾಸ್, ಶಿವು ಎಂಬ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Also read: ರೌಡಿಶೀಟರ್ ಕಾಲಿಗೆ ಗುಂಡೇಟು | ಘಟನೆ ಬಗ್ಗೆ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು?
ಕೋರಮಂಗಲದ ಹೋಟೆಲ್‌ನಲ್ಲಿ ಕೆಲಸ ಮಾಡುವ ಆರೋಪಿಗಳು ಗುರುವಾರ ಸಂಜೆ ನಡೆದ ಕಾರ್ಯಕ್ರಮವೊಂದರಲ್ಲಿ ತನ್ನೊಂದಿಗೆ ಸ್ನೇಹ ಬೆಳೆಸಿಕೊಂಡು ಊಟಕ್ಕೆ ಆಹ್ವಾನಿಸಿದರು. ಬಳಿಕ ಮುಚ್ಚಿ ಹೋಗಿದ್ದ ಹೋಟೆಲ್ ಒಂದರ ಟೆರೇಸ್ ಮೇಲೆ ಕರೆದುಕೊಂಡು ಹೋಗಿ ಊಟ ಮಾಡಿದ ನಂತರ ನಾಲ್ವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಬೆಳಗ್ಗೆ ಐದು ಘಂಟೆ ಸುಮಾರಿಗೆ ಮೊಬೈಲ್, ಪರ್ಸ್ ಕಿತ್ತುಕೊಂಡು ಮಹಿಳೆಯನ್ನು ಆರೋಪಿಗಳು ಓಡಿಸಿದ್ದಾರೆ. ಘಟನೆ ಬಳಿಕ 122 ಕರೆ ಮಾಡಿದ ಮಹಿಳೆ ಮಾಹಿತಿ ನೀಡಿದ್ದಾರೆ. ದೂರಿನಲ್ಲಿ ನಾಲ್ವರು ವ್ಯಕ್ತಿಗಳ ಹೆಸರುಗಳನ್ನು ಹೆಸರಿಸಲಾಗಿದ್ದು, ಅವರಲ್ಲಿ ಮೂವರನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳು ಬೇರೆ ರಾಜ್ಯದವರು ಮತ್ತು ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಂಟಿ ಆಯುಕ್ತ(ಪೂರ್ವ) ರಮೇಶ್ ಬಾನೋತ್ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post