ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ದೇಶದ ಅನೇಕ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸಿ ತಾಣಗಳನ್ನು ನಿರ್ಮಿಸಿ ಪ್ರವಾಸೋದ್ಯಮ ಇಲಾಖೆಯಿಂದಲೇ ಬಹಳಷ್ಟು ಆದಾಯಗಳಿಸುತ್ತಿವೆ. ಅದರಂತೆ ರಾಜ್ಯ ಸರ್ಕಾರ ಕೂಡ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದ ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅದಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿನ ಅನೇಕ ಪ್ರವಾಸಿ ತಾಣಗಳು ಅಳಿವಿನ ಅಂಚಿನಲ್ಲಿವೆ, ಅವುಗಳನ್ನು ಅಭಿವೃದ್ಧಿಪಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರಂತೆಯೇ, ಕರ್ನಾಟಕದ ಕಿರೀಟ ಎಂದು ಕರೆಯಲಾಗುವ ಬೀದರ್‌ಗೆ ತನ್ನದೆಯಾದ ಇತಿಹಾಸವಿದೆ. ಇಲ್ಲಿನ ಪ್ರವಾಸಿ ತಾಣಗಳನ್ನು ಸರ್ಕಾರ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದರು.
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಐತಿಹಾಸಿಕ ಸ್ಥಳಗಳಿವೆ. ಇದು ಹೈದ್ರಾಬಾದ್ ಗೂ ಹತ್ತಿರವಾಗುತ್ತದೆ. ಸರ್ಕಾರ ಬೀದರ್ ನಲ್ಲಿನ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೊಳಿಸುವ ಮೂಲಕ ಪ್ರವಾಸಿಗರನ್ನು ಸೆಳೆಯುವ ಕೆಲಸ ಮಾಡಬೇಕು. ಬೀದರ್‌ನಲ್ಲೂ ಫಿಲಂ ಸಿಟಿಗೆ ಅನುಮತಿ ನೀಡಬೇಕು. ಹಾಗೂ ಕ್ಷೇತ್ರದಲ್ಲಿನ ವೀರಭದ್ರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ ೩ ಕೋಟಿ ರೂ. ಅನುದಾನ ನೀಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು.
ಪ್ರವಾಸೋದ್ಯಮ, ಪುರಾತತ್ವ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿನ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳುವುದಾಗಿ ಸಚಿವ ಸಿ.ಪಿ ಯೋಗೇಶ್ವ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post