No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭಯೋತ್ಪಾದನೆಯನ್ನು ಎದುರಿಸಲು ಗೊ.ರು. ಚನ್ನಬಸಪ್ಪ ಅವರ ಪುಸ್ತಕ ಶಕ್ತಿ ನೀಡುತ್ತದೆ: ಸಿಎಂ

ಭಯೋತ್ಪಾದನೆ ಮತ್ತು ಭಯೋತ್ಪಾದಕ ಬೆದರಿಕೆಗೆ ಪ್ರತಿರೋಧ ಕೃತಿ ಲೋಕಾರ್ಪಣೆ

kalpa News by kalpa News
April 26, 2022
in ಬೆಂಗಳೂರು ನಗರ
0
ಭಯೋತ್ಪಾದನೆಯನ್ನು ಎದುರಿಸಲು ಗೊ.ರು. ಚನ್ನಬಸಪ್ಪ ಅವರ ಪುಸ್ತಕ ಶಕ್ತಿ ನೀಡುತ್ತದೆ: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭಯೋತ್ಪಾದನೆ ಎಂಬ ಪಿಡುಗು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ, ಜಾಗತಿಕವಾಗಿ ಹರಡಿದೆ. ಇದನ್ನು ಈ ಜಗತ್ತಿನ ಪ್ರತಿಯೊಬ್ಬ ನಾಗರಿಕನೂ ಎದುರಿಸುವ ಶಕ್ತಿಯನ್ನು ಪಡೆದುಕೊಳ್ಳಬೇಕು. ಅಂಥ ಶಕ್ತಿಯನ್ನು ಗೊ.ರು.ಚನ್ನಬಸಪ್ಪ ಅವರು ಬರೆದಿರುವ ಪುಸ್ತಕ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಕರ್ನಾಟಕ ಸಾಹಿತ್ಯ ಪರಿಷತ್ತು, ಬೆಂಗಳೂರು ವತಿಯಿಂದ ಆಯೋಜಿಸಿರುವ ಹಿರಿಯ ಸಾಹಿತಿಗಳಾದ ನಾಡೋಜ ಗೊ.ರು. ಚನ್ನಬಸಪ್ಪ ಅವರು ಕನ್ನಡಕ್ಕೆ ಅನುವಾದಿಸಿರುವ ‘ಭಯೋತ್ಪಾದನೆ ಮತ್ತು ಭಯೋತ್ಪಾದಕ ಬೆದರಿಕೆಗೆ ಪ್ರತಿರೋಧ’ ಎಂಬ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಗೊ. ರು. ಚ ಅವರು ಅತ್ಯಂತ ಸೂಕ್ಷ್ಮ ಜೀವಿಗಳು. ಜಾಗತೀಕರಣದ ಒಟ್ಟು ಪ್ರಭಾವ, ಗೊ.ರು.ಚ ಅವರಂಥ ಹಿರಿಯರ ಸೂಕ್ಷ್ಮತೆಯನ್ನೂ ಮೀರಿದೆ. ಅಪರೂಪ ಸಾಹಿತಿ ಸಂಶೋಧಕರು, ಸಾಂಸ್ಕøತಿಕ ರಾಯಭಾರಿ ರಣಜಿತ್ ಕೆ. ಪಚ್ನಂದ ಅವರು ರಚಿಸಿರುವ ಕೃತಿಯನ್ನು ಅರ್ಥಪೂರ್ಣವಾಗಿ ಸ್ಪಷ್ಟವಾದ ಉದ್ದೇಶವನ್ನಿಟ್ಟುಕೊಂಡು ಬರೆದಿದ್ದಾರೆ. ಭಯೋತ್ಪಾದನೆಯ ಬಗ್ಗೆ ಎಲ್ಲರೂ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು . ಅದನ್ನು ನಿಗ್ರಹಿಸವ ಶಕ್ತಿಯನ್ನು ಪಡೆದುಕೊಳ್ಳಬೇಕೆಂದು ಅತ್ಯುತ್ತಮವಾಗಿ ಅನುವಾದ ಮಾಡಿದ್ದಾರೆ. ಯಾವುದೇ ವಿಚಾರವಿದ್ದರೂ ಸ್ಪಷ್ಟವಾಗಿ, ಸರಳವಾಗಿ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಿದ್ದಾರೆ. ಪ್ರತಿರೋಧ ಇದ್ದಲ್ಲಿ ಸತ್ಯ ಹೊರಗೆ ಬಂದು ಜಯ ಸಿಗುತ್ತದೆ. ಅದಕ್ಕೆ ಈ ಪುಸ್ತಕ ಸ್ಪೂರ್ತಿ ತುಂಬುತ್ತದೆ. ಈ ಪುಸಕ್ತದ ಅನುವಾದ ಮಾಡಿದ್ದಕ್ಕಾಗಿ ಗೊ.ರು.ಚ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಜ್ವಲಂತ ಸಮಸ್ಯೆಗೆ ಕನ್ನಡಿ ಹಿಡಿದ ಕೃತಿ :
ಗೊ.ರು.ಚನ್ನಬಸಪ್ಪ ಅವರು ತಮ್ಮ ಕೃತಿಯ ಮೂಲಕ ಸಮಕಾಲೀನ, ಪ್ರಚಲಿತ, ಜ್ವಲಂತ ಸಮಸ್ಯೆಗೆ ಕನ್ನಡಿ ಹಿಡಿದು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ನಮ್ಮಲ್ಲಿ ಭಯ ಇದೆ. ಶ್ರೀಮಂತರಿಗೆ ಹಣ ಕಳೆದುಕೊಳ್ಳುವ ಭಯ, ರಾಜಕಾರಣಿಗೆ ಪದವಿ ಕಳೆದುಕೊಳ್ಳುವ ಭಯ. ಈ ನಕರಾತ್ಮಕ ಭಾವನೆ ಭಯಕ್ಕೆ ನಾಂದಿಯಾಗುತ್ತದೆ. ಭಯದಿಂದ ಭಯೋತ್ಪಾದನೆ ಹುಟ್ಟುತ್ತದೆ. ಭಯೋತ್ಪಾದನೆ ಜಗತ್ತನ್ನು ವಿನಾಶದತ್ತ ತೆಗೆದುಕೊಂಡು ಹೋಗುವ ಭಯ. ಹಿಂಸೆಯಿಂದ ಸಾಧನೆ ಮಾಡಬಹುದು ಎಂಬ ಭಾವನೆ ದೊಡ್ಡ ದುರಂತ. ಮನುಷ್ಯನಿಗೆ ಜೀವ ಕೊಡುವ ಅಧಿಕಾರವಿಲ್ಲವೆಂದ ಮೇಲೆ ಜೀವ ತೆಗೆಯುವ ಅಧಿಕಾರವೂ ಇರುವುದಿಲ್ಲ. ಆದರೆ ಇದನ್ನು ಮೀರಿ ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ. ಒಂದಷ್ಟು ಜನರನ್ನು ಕೊಲ್ಲುವ ಮೂಲಕ ಸ್ವರ್ಗ ಪ್ರಾಪ್ತಿಯಾಗುತ್ತದೆ ಎನ್ನುವ ಕಲ್ಪನೆಯಿಂದ ದುರಂತಗಳು ಸಂಭವಿಸುತ್ತವೆ ಎಂದರು.

ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು:
ಸಹಜವಾದ ಸಾಮಾಜಿಕ ವ್ಯವಸ್ಥೆಯಡಿ ಭಯೋತ್ಪಾದಕರು ಬರುವುದಿಲ್ಲ. ವೈಯಕ್ತಿಕವಾಗಿ, ಸಾಮಾಜಿಕವಾಗಿ ವೈಚಾರಿಕವಾಗಿ ಭಯೋತ್ಪಾದನೆಯನ್ನು ಎದುರಿಸಬೇಕಾಗುತ್ತದೆ. ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಿ ತಮ್ಮ ಕರ್ತವ್ಯ ನಿಭಾಯಿಸಬೇಕು. ಜನರು ಸ್ಪಂದನಾಶೀಲರಾಗಬೇಕು ಹಾಗೂ ಇಂತಹ ಚಟುವಟಿಕೆಗಳನ್ನು ಸಾಮೂಹಿಕವಾಗಿ ಎದುರಿಸಬೇಕು. ಭಯೋತ್ಪಾದನೆಯನ್ನು ವಿಜೃಂಭಿಸಬಾರದು. ಎಲ್ಲಿವರೆಗೆ ಸಮಾಜದಲ್ಲಿ ಹಿಂಸೆ ಇರುತ್ತದೋ ಅಲ್ಲಿವರೆಗೆ ಭಯೋತ್ಪಾದನೆಗೆ ಅವಕಾಶವಾಗುತ್ತದೆ. ಸರ್ಕಾರವೂ ಇಂತಹ ಚಟುವಟಿಕೆಗಳಿಗೆ ತಕ್ಷಣ ಹಾಗೂ ತೀಕ್ಷ್ಣ ಪ್ರತಿಕ್ರಿಯೆಯನ್ನು ನೀಡಲು. ಸಾಧ್ಯ ಎಂದರು.

Also read: ಬೆಂಗಳೂರು ಟೆಕ್ ಸಮಿಟ್ 2022: ಐಟಿ-ಬಿಟಿ ಕಂಪನಿ ಸಿಇಒಗಳ ಜತೆ ಸಿಎಂ ಸಮಾಲೋಚನಾ ಸಭೆ


ಜಾನಪದಕ್ಕೆ ಶಾಶ್ವತ ಸ್ವರೂಪ ನೀಡಿದ ಗೊ.ರು.ಚ

ಗೊ.ರು.ಚ ಅವರು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶರಣ ಸಾಹಿತ್ಯ ಪರಿಷತ್ತು ಅಲ್ಲದೆ ಜಾನಪದದಲ್ಲಿ ಆಸಕ್ತಿ ಹೊಂದಿದ್ದವರು. ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪನೆಗೆ ಮೂಲ ಕಾರಣ ಅವರು. ಜಾನಪದ ವಿಶ್ವವಿದ್ಯಾಲಯದ ಅವಶ್ಯಕತೆಯನ್ನು ತಿಳಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿಕೊಟ್ಟರು. ಇಡೀ ವಿಶ್ವದಲ್ಲಿ ಏಕಮೇವ ಜಾನಪದ ವಿಶ್ವವಿದ್ಯಾಲಯ ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನಲ್ಲಿ ಎಂಬ ಬಗ್ಗೆ ಹೆಮ್ಮೆ ಇದೆ. ಅದು ಇಂದು ಅತ್ಯುತ್ತಮವಾದ ಸಂಸ್ಥೆಯಾಗಿ ಹೊರಹೊಮ್ಮುತ್ತಿದೆ. ಜಾನಪದಕ್ಕೆ ಶಾಶ್ವತ ಸ್ವರೂಪವನ್ನು ಕೊಟ್ಟು ಕೆಲಸ ಮಾಡಿರುವ ಗೊ.ರು.ಚ ಅವರು ಶರಣ ಸಾಹಿತ್ಯ ಮತ್ತು ಪರಿಷತ್ತಿನ ಅಧ್ಯಕ್ಷರಾಗಿ ಅವರು ಮಾಡಿರುವ ಕೆಲಸ ಅಮೋಘವಾಗಿರುವಂಥದ್ದು. ವಚನ ಸಾಹಿತ್ಯಕ್ಕೆ ಶರಣ ಸಾಹಿತ್ಯ ಎಂಬ ಆಯಾಮವನ್ನು ಕೊಟ್ಟು ಎಲ್ಲ ಶರಣರ ಸಾಹಿತ್ಯವನ್ನು ಒಗ್ಗೂಡಿಸಿ ಅದರ ತಿರುಳನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸವನ್ನು ಅವರು ಮಾಡಿದ್ದಾರೆ. ಅದೇ ರೀತಿ ಕನ್ನಡ ಸಾಹಿತ್ಯಕ್ಕೂ ಅವರ ಕೊಡುಗೆ ಅಪಾರವಾಗಿದೆ. ಕನ್ನಡದ ಅತ್ಯಂತ ಹೆಮ್ಮೆಯ ಸುಪುತ್ರರು ಗೊ.ರು.ಚ ಅವರು. ಅವರೊಂದಿಗೆ ಕೆಲಸ ಮಾಡುವ ಭಾಗ್ಯ ಸಿಕ್ಕಿದ್ದೇ ನಮ್ಮ ಭಾಗ್ಯ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಟೆಕ್ ಸಮಿಟ್ 2022: ಐಟಿ-ಬಿಟಿ ಕಂಪನಿ ಸಿಇಒಗಳ ಜತೆ ಸಿಎಂ ಸಮಾಲೋಚನಾ ಸಭೆ

Next Post

ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು: ಸಚಿವ ಸುಧಾಕರ್

kalpa News

kalpa News

Next Post
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು: ಸಚಿವ ಸುಧಾಕರ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL