ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Thavar chand Gehlot ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಹಿರಿಯ ಚೇತನರನ್ನು ಸನ್ಮಾನಿಸಲಿದ್ದಾರೆ,
ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆಗಸ್ಟ್ 9 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಮಲ್ಲೇಶ್ವರಂ ಬಡಾವಣೆಯಲ್ಲಿರುವ ವಿ. ನಾಗಭೂಷಣ ರಾವ್ ಅವರ ಮನೆಗೆ ತೆರಳಿ ರಾಜ್ಯಪಾಲರು ಸನ್ಮಾನಿಸಿ ಗೌರವ ಅರ್ಪಿಸಲಿದ್ದಾರೆ.

Also read: ಹೆತ್ತ ಮಗುವನ್ನೇ ಹತ್ಯೆಗೈದ ತಾಯಿ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ
ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










Discussion about this post