ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಗೂ ಮುನ್ನ ತನ್ನ ನೌಕರರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ ತುಟ್ಟಿ ಭತ್ಯೆ(ಡಿಎ) DA ಏರಿಕೆ ಮಾಡಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಶೇ.3.75ರಷ್ಟು ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದ್ದು, 2024ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಹೇಳಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 38.75 ರಿಂದ ಶೇ. 42.5ಕ್ಕೆ ಹೆಚ್ಚಿಸಲಾಗಿದೆ.
Also read: ಕೋಟೆ ಮಾರಿಕಾಂಬಾ ಜಾತ್ರೆ | ಸಂಸದರೊಂದಿಗೆ ಸೆಲ್ಫಿಗೆ ಮುಗಿಬಿದ್ದ ಜನ | ಸರಳತೆ ಮೆರೆದ ರಾಘವೇಂದ್ರ
ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















