ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ ಪೂರ್ವದಲ್ಲಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಎಲ್ಲಾ ಸೌಲಭ್ಯಗಳನ್ನು ಇನ್ನು ಮುಂದೆ ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳು ಸರಿಯಾಗಿ ನಡೆಯದ ಹಿನ್ನೆಲೆಯಲ್ಲಿ ಮಕ್ಕಳಿಗೆ ಸೈಕಲ್ ವಿತರಣೆ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಪ್ರಸ್ತುತ ವರ್ಷದಿಂದ ಪುಸ್ತಕ, ಶಾಲಾ ಸಮವಸ್ತ್ರ, ಬ್ಯಾಗ್‌ಗಳ ಜೊತೆಗೆ ಸೈಕಲ್ ಸಹ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post