ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೇ 29ಕ್ಕೆ ರೆಬಲ್’ಸ್ಟಾರ್ ಅಂಬರೀಶ್ Rebelstar Ambreesh ಅವರ ಜನ್ಮದಿನವಾಗಿದ್ದು, ಅಂದು ಅವರ ಅಭಿನಯದ ಸೂಪರ್ ಹಿಟ್ ಚಿತ್ರ `ಅಂತ’ Antha ಮತ್ತೊಮ್ಮೆ ಬಿಡುಗಡೆಯಾಗಲಿದೆ.
ಈ ಕುರಿತಂತೆ ಮಾತನಾಡಿರುವ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಅಂತ ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ ಎಂದರು.

ಇಡೀ ಚಿತ್ರದ ಚಿತ್ರೀಕರಣ ಮೈಸೂರಿನಲ್ಲೇ ನಡೆದಿದೆ. ಹದಿನೆಂಟು ಅದ್ದೂರಿ ಸೆಟ್ ಹಾಕಲಾಗಿತ್ತು. ಅಂತ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿತ್ತು. ನನಗೆ ತಿಳಿದಿರುವ ಪ್ರಕಾರ ಈ ಚಿತ್ರದ ಸ್ಪೂರ್ತಿಯಿಂದ ಸಾವಿರಾರು ಚಿತ್ರಗಳು ಬಂದಿದೆ. ಅಂತ ಆಗಲೇ ಪ್ಯಾನ್ ಇಂಡಿಯಾ ಸಿನಿಮಾ ಆಗಿತ್ತು. ಬೇರೆ ಬೇರೆ ಭಾಷೆಯಲ್ಲಿ ತುಂಬಾ ಬೇಡಿಕೆಯಿತ್ತು. ನನ್ನ ಪ್ರಕಾರ ಚಿತ್ರದ ನಿಜವಾದ ಹೀರೋ ಕಥೆ. ಆ ಕಥೆ ಚೆನ್ನಾಗಿತ್ತು ಎಂದರೆ ಯಶಸ್ಸು ಖಂಡಿತ. ಇಂತಹ ಅದ್ಭುತ ಅಂತ ಚಿತ್ರ ಇದೇ ಮೇ 26 ಮರು ಬಿಡುಗಡೆಯಾಗುತ್ತಿದೆ. ಒಳ್ಳೆಯದಾಗಲಿ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post