ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೇ 29ಕ್ಕೆ ರೆಬಲ್’ಸ್ಟಾರ್ ಅಂಬರೀಶ್ Rebelstar Ambreesh ಅವರ ಜನ್ಮದಿನವಾಗಿದ್ದು, ಅಂದು ಅವರ ಅಭಿನಯದ ಸೂಪರ್ ಹಿಟ್ ಚಿತ್ರ `ಅಂತ’ Antha ಮತ್ತೊಮ್ಮೆ ಬಿಡುಗಡೆಯಾಗಲಿದೆ.
ಈ ಕುರಿತಂತೆ ಮಾತನಾಡಿರುವ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಅಂತ ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ ಎಂದರು.
1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು ನಿರ್ದೇಶಿಸಬೇಕಿತ್ತು. ಆದರೆ ಪತ್ರಕರ್ತ ಎಂ.ಬಿ. ಸಿಂಗ್ ಅವರ ಮೂಲಕ ಕಥೆ ನನಗೆ ದೊರಕಿತು. ಪರಿಮಳ ಆರ್ಟ್ಸ್ ಮೂಲಕ ಮಾರುತಿ, ವೇಣು ಹಾಗೂ ಕೆಸಿಎನ್ ಚಂದ್ರಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಅಂಬರೀಶ್ ಅವರು ನಾಯಕ ಎಂದು ತೀರ್ಮಾನಿಸಲಾಯಿತು. ಲಕ್ಷ್ಮೀ ಈ ಚಿತ್ರದ ನಾಯಕಿ. ವಜ್ರಮುನಿ, ಸುಂದರಕೃಷ್ಣ ಅರಸ್, ಮುಸುರಿ ಕೃಷ್ಣಮೂರ್ತಿ, ಪ್ರಭಾಕರ್ ಮುಂತಾದವರು ಇದರಲ್ಲಿ ನಟಿಸಿದ್ದಾರೆ ಎಂದರು.
ಇಡೀ ಚಿತ್ರದ ಚಿತ್ರೀಕರಣ ಮೈಸೂರಿನಲ್ಲೇ ನಡೆದಿದೆ. ಹದಿನೆಂಟು ಅದ್ದೂರಿ ಸೆಟ್ ಹಾಕಲಾಗಿತ್ತು. ಅಂತ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿತ್ತು. ನನಗೆ ತಿಳಿದಿರುವ ಪ್ರಕಾರ ಈ ಚಿತ್ರದ ಸ್ಪೂರ್ತಿಯಿಂದ ಸಾವಿರಾರು ಚಿತ್ರಗಳು ಬಂದಿದೆ. ಅಂತ ಆಗಲೇ ಪ್ಯಾನ್ ಇಂಡಿಯಾ ಸಿನಿಮಾ ಆಗಿತ್ತು. ಬೇರೆ ಬೇರೆ ಭಾಷೆಯಲ್ಲಿ ತುಂಬಾ ಬೇಡಿಕೆಯಿತ್ತು. ನನ್ನ ಪ್ರಕಾರ ಚಿತ್ರದ ನಿಜವಾದ ಹೀರೋ ಕಥೆ. ಆ ಕಥೆ ಚೆನ್ನಾಗಿತ್ತು ಎಂದರೆ ಯಶಸ್ಸು ಖಂಡಿತ. ಇಂತಹ ಅದ್ಭುತ ಅಂತ ಚಿತ್ರ ಇದೇ ಮೇ 26 ಮರು ಬಿಡುಗಡೆಯಾಗುತ್ತಿದೆ. ಒಳ್ಳೆಯದಾಗಲಿ ಎಂದು ತಿಳಿಸಿದರು.
ನಿರ್ಮಾಪಕ ವೇಣು ಮಾತನಾಡಿ, ಮೇ29 ರಂದು ಅಂಬರೀಶ್ 71ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಮೇ 26 ರಂದು ಅಂತ ಚಿತ್ರವನ್ನು 70 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡುತ್ತಿದ್ದೇವೆ. ಜಯಣ್ಣ ಫಿಲಂಸ್ ಅವರು ಬಿಡುಗಡೆ ಮಾಡುತ್ತಿದ್ದಾರೆ. 35 ಎಂ ಎಂ ನಿಂದ 70 ಎಂ ಎಂ ಮಾಡಲಾಗಿದೆ. ಸೌಂಡ್, ಕಲರಿಂಗ್ ಎಲ್ಲವನ್ನೂ ಈಗಿನ ರೀತಿಗೆ ಬದಲಿಸಲಾಗಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post