ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಎಫ್’ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Mninster Dinesh Gundurao ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ.
ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ #KFD Vaccine ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ಕೋರಿದರು.

Also read: ಹಿರಿಯೂರು | ಭಾರೀ ಮಳೆ | ವಾಣಿ ವಿಲಾಸ ಜಲಾಶಯಕ್ಕೆ ಅಪಾರ ನೀರು | ತುಂಬಲು ಇನ್ನೆಷ್ಟು ಅಡಿ ಬಾಕಿ?
ಭೇಟಿ ವೇಳೆ ರಾಜ್ಯದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜು ಮಕ್ಕಳನ್ನ ರಕ್ತಗೀನತೆ ತಪಾಸಣೆಗೆ ಒಳಪಡಿಸುತ್ತಿರುವುದು ಉತ್ತಮ ಯೋಜನೆ ಎಂದಿದ್ದಾರೆ. ಅಲ್ಲದೇ ಭಾರತ ಸರ್ಕಾರದ ರಕ್ತ ಹೀನತೆ ಮುಕ್ತ ಭಾರತ್ 2.O ಯೋಜನೆಗೆ ಅನುಗುಣವಾಗಿ ಯೋಜನೆ ವಿಸ್ತರಿಸುವಂತೆ ಸಚಿವರಲ್ಲಿ ವಿನಂತಿಸಿದರು.

ಆರೋಗ್ಯ ಸೇವೆಗಳ ಉತ್ತಮ ವಿತರಣೆಗಾಗಿ ಸಾರ್ವಜನಿಕ ಆರೋಗ್ಯ ಸಂಶೋಧನೆಯಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪರಸ್ಪರ ಸಹಕರಿಸುವ ನಿಟ್ಟಿನಲ್ಲಿ ಭೇಟಿ ವೇಳೆ ಚರ್ಚೆ ನಡೆಸಲಾಯಿತು. ಸಚಿವರ ಜೊತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ್ ಗುಪ್ತಾ, NHM ಎಂ.ಡಿ ನವೀನ್ ಭಟ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post