ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಸಂಕಷ್ಟದಿಂದ ತತ್ತರಿಸುವ ಜನರಿಗೆ ಗುಡ್ ನ್ಯೂಸ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಾರಿ ಯಾವುದೇ ರೀತಿಯ ಹೊಸ ತೆರಿಗೆಯನ್ನು ಜನರ ಮೇಲೆ ಹೇರುವುದಿಲ್ಲ ಎಂದು ಘೋಷಿಸಿದ್ದಾರೆ.
2021-22ನೇ ಆರ್ಥಿಕ ಸಾಲಿನ ಬಜೆಟ್ ಮಂಡಿಸಿ ಮಾತನಾಡಿದ ಅವರು, ಯಾವುದೇ ಹೊಸ ತೆರಿಗೆ ವಿಧಿಸದೆ, ಈಗಿರುವ ತೆರಿಗೆಯನ್ನು ಕಡಿತ ಮಾಡದೇ ಸಮತೋಲನದ ಬಜೆಟ್ ಮಂಡಿಸುವ ಪ್ರಯತ್ನ ಮಾಡಿದ್ದಾರೆ.
45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಕೂಡ ಇಲ್ಲ ಎಂದಿರುವ ಅವರು, ಇದರಿಂದ ಮಧ್ಯಮ ವರ್ಗದ ನಗರ ಪ್ರದೇಶದ ನಿವಾಸಿಗಳಿಗೆ ಪ್ರಯೋಜನವಾಗಲಿದೆ. ನೋಂದಣಿ, ಮುದ್ರಾಂಕ ಶುಲ್ಕ ಶೇ.5ರಿಂದ ಶೇಕಡಾ 3ಕ್ಕೆ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post