ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಒಂದುವಾರಗಳ ಕಾಲ ಭಾರೀ ಮಳೆಯಾಗುವ #Heavy Rain ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಒಂದು ವಾರಗಳ ಕಾಲ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
Also read: ಇಬ್ಬರು ಬಾಲಕಿಯರ ಮೇಲೆ 3 ಅಪ್ರಾಪ್ತರು ಸೇರಿ 6 ಜನರಿಂದ ಸಾಮೂಹಿಕ ಅತ್ಯಾಚಾರ
ಇನ್ನು, ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿAದ ಮೋಡ ಕವಿದಿದ್ದು ವಾತಾವರಣ ತಂಪಾಗಿದೆ. ನಗರದಲ್ಲಿಯೂ ಸಹ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ.
ಮಳೆ ಜೊತೆಗೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಗುಡುಗು ಮಿಂಚು ಇರಲಿದೆ. ಸಾರ್ವಜನಿಕರು ಗಾಳಿ ಮಳೆಯ ವೇಳೆ ಮರದ ಕೆಳಗೆ, ಇನ್ನಿತರೆ ಅಸುರಕ್ಷಿತ ಜಾಗಗಳಲ್ಲಿ ಇರದಂತೆ ಇಲಾಖೆ ಎಚ್ಚರಿಸಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು,ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post