ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಂದಿನ 24 ಗಂಟೆಗಳಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಕರಾವಳಿ ತೀರ ಭಾಗ ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯಾಗಲಿದ್ದು, ಕಲಬುರ್ಗಿ, ಬೀದರ್, ದಾವಣಗೆರೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Also read: ಫ್ಯಾಶನ್ ಲೋಕದಲ್ಲಿ ಸಂಚಲನ | ಹೇರ್ ಸ್ಟೈಲ್ ಶೋನಲ್ಲಿ ಮಂತ್ರಮುಗ್ದಗೊಂಡ ಪ್ರೇಕ್ಷಕರು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















