ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದುಡಿದು ತಿನ್ನುವ ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ದೌರ್ಜನ್ಯ ನಡೆಯುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ #Minister Dinesh GunduRao ಹೇಳಿದ್ದಾರೆ.
ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ #Dr. B. R. Ambedkar ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ರವಿ ಶೆಟ್ಟಿ ಬೈಂದೂರ್ ಸಾರಥ್ಯದಲ್ಲಿ ನಡೆದ “ಶ್ರಮಿಕರ ಸಂವಾದ ಸಭೆ”ಯಲ್ಲಿ ಕಿಕ್ಕಿರಿದು ತುಂಬಿದ್ದ ಸಂತ್ರಸ್ತರ ಜೊತೆ ಸಂವಾದ ನಡೆಸಿ ಮಾತನಾಡಿದ ಅವರು, ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ. ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಖಂಡನೀಯ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸರ್ಕಾರ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಸಂವಾದದಲ್ಲಿ ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಎಳೆಎಳೆಯಾಗಿ ಬಿಡಿಸಿಟ್ಟರು. ಬಿಬಿಎಂಪಿ ಅಧಿಕಾರಿಗಳು ಬೇಕರಿಗಳ ಮೇಲೆ ದಾಳಿ ಮಾಡಿ ಗರಿಷ್ಠ 25 ಸಾವಿರ ರೂ ವರೆಗೆ ದಂಡ ವಿಧಿಸುತ್ತಿದ್ದಾರೆ. ಮರಿ. ಪುಢಾರಿ ರೌಡಿಗಳ ಉಪಟಳವೂ ಹೆಚ್ಚಾಗಿದೆ. ಪರಿಸರ ಮಾಲೀನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಮ್ಮ ಮೇಲೆ ದರ್ಪ, ದೌರ್ಜನ್ಯ ತೋರುತ್ತಿದ್ದಾರೆ. ಸರ್ಕಾರ ನಮಗೆ ರಕ್ಷಣೆ ನೀಡದಿದ್ದರೆ ನಾವು ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶ್ರಮಿಕರ ನೇರ ಸಂವಾದ” ಕಾರ್ಯಕ್ರಮದಲ್ಲಿ ಸಂತೋಷ ಗುರೂಜಿ, ಹಿರಿಯ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ, ಸಮತಾ ಸೈನಿಕದಳ ವೆಂಕಟಸ್ವಾಮಿ ಏನ್, ಆರ್ ರಮೇಶ್, ಚಾಲಕರ ಸಂಘಟನೆಯಿಂದ ಗಂಡಸಿ ಸದಾನಂದ ಸ್ವಾಮಿ, ಬೆಂಗಳೂರು ಹೋಟೆಲ್ ಸಂಘದ ಗೌ, ಅಧ್ಯಕ್ಷರು ಪಿ ಸಿ ರಾವ್, ಮಧುಕರ್ ಶೆಟ್ಟಿ, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post