No Result
View All Result
SWR to run special trains for Good Friday, Easter rush
English Articles

Summer Special Train Between Tiruchchirappalli & SMVT Bengaluru

by ಕಲ್ಪ ನ್ಯೂಸ್
April 2, 2026
0

Kalpa Media House  |  Bengaluru | Southern Railway has notified the operation of four-trip special trains between Tiruchchirappalli and Sir...

Read moreDetails
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶ್ರವಣ ದೋಷ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಬದ್ಧ: ಆರೋಗ್ಯ ಸಚಿವ ಸುಧಾಕರ್

ಜನಿಸುವಾಗಲೇ ಕಿವುಡುತನದ ಸಮಸ್ಯೆ ಇದ್ದ 500 ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಗೆ ಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2022
in ಬೆಂಗಳೂರು ನಗರ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಎಲ್ಲರಿಗೂ ಆರೋಗ್ಯ ಎಂಬ ಘೋಷಣೆಯನ್ನು ಸಾಕಾರಗೊಳಿಸಲು ಹಾಗೂ ಶ್ರವಣ ದೋಷ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, 6 ವರ್ಷದೊಳಗಿನ ಮಕ್ಕಳ ಶ್ರವಣ ದೋಷ ನಿವಾರಣೆಗೆ ವಿಶೇಷ ಗಮನ ಹರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Minister Sudhakar ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೇ ಸಾಲಿನ ಬಜೆಟ್ ನಲ್ಲಿ ‘ಶ್ರವಣ ದೋಷ ಮುಕ್ತ ಕರ್ನಾಟಕ” ನಿರ್ಮಾಣ ಮಾಡುವ ಘೋಷಣೆ ಮಾಡಿದ್ದು, ಈ ಯೋಜನೆ ಕುರಿತು ಸಚಿವರು ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದರು.
ಈ ವರ್ಷ ಎಲ್ಲಾ ಜನ್ಮಜಾತ ಶ್ರವಣ ದೋಷ ಸಮಸ್ಯೆ ಇರುವ ಮಕ್ಕಳ ಸಮಸ್ಯೆ ನಿವಾರಣೆಗೆ ವಿಶೇಷ ಗಮನಹರಿಸಲಾಗಿದ್ದು, ಶ್ರವಣ ದೋಷ ಸಮಸ್ಯೆ ಇರುವ ಮಕ್ಕಳಲ್ಲಿ ಮಾತು ಮತ್ತು ಶ್ರವಣ ಸಾಮರ್ಥ್ಯ ಸುಧಾರಿಸಲು 500 ಮಕ್ಕಳಿಗೆ ಉಚಿತವಾಗಿ ಕಾಕ್ಲಿಯರ್ ಇಂಪ್ಲಾಂಟ್ ಮಾಡಲು ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿದೆ ಎಂದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ 6 ವರ್ಷದೊಳಗಿನ 1,939 ಮಕ್ಕಳು ಶ್ರವಣ ದೋಷಕ್ಕೊಳಗಾಗಿದ್ದಾರೆ ಎಂದು ಗುರುತಿಸಲಾಗಿದೆ. ಈ ಪೈಕಿ ಹೆಚ್ಚಿನವರು ಜನ್ಮಜಾತ ಕಿವುಡು ಸಮಸ್ಯೆಗೆ ಸಿಲುಕಿದ್ದು, ಪ್ರಸವಪೂರ್ವ ಅವಧಿಯಲ್ಲಿ ಔಷಧ ಸೇವನೆ, ವೈರಾಣು ಸೋಂಕು, ಉಸಿರುಗಟ್ಟುವಿಕೆ, ಆಘಾತದಂತಹ ಸಮಸ್ಯೆಗಳು ಇದಕ್ಕೆ ಮೂಲ ಕಾರಣ ಎಂದು ಹೇಳಿದರು.
ಕಾಕ್ಲಿಯರ್ ಇಂಪ್ಲಾಂಟ್ ಒಂದು ಸಣ್ಣ ಎಲೆಕ್ಟ್ರಾನಿಕ್ ಸಾಧನವಾಗಿದ್ದು, ಈ ಸಾಧನವು ತೀವ್ರ ಮತ್ತು ಆಳವಾದ ಶ್ರವಣ ದೋಷ ಹೊಂದಿರುವ ಮಕ್ಕಳಿಗೆ ಶಬ್ದಗಳನ್ನು ಕೇಳಲು ಸಹಾಯ ಮಾಡುತ್ತದೆ. ಒಳ ಕಿವಿಯ ಕಾಕ್ಲಿಯಾಗೆ ಸೇರಿಸಿ ಇಂಪ್ಲಾಂಟ್ ಅಳವಡಿಸಿದ ನಂತರ ಪ್ರೊಸೆಸರ್ ಅನ್ನು ಕಿವಿಯ ಹಿಂದೆ ಇರಿಸಲಾಗುತ್ತದೆ, ನಿಷ್ಕ್ರಿಯ ಶ್ರವಣ ಸಾಧನ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಮತ್ತು ಆಡಿಯೋ ಸಂಕೇತಗಳನ್ನು ಮೆದುಳಿಗೆ ರವಾನಿಸುತ್ತದೆ ಎಂದು ಸಚಿವರು ವಿವರ ನೀಡಿದರು.

Also read: ಶೃಂಗೇರಿ ಜಗದ್ಗುರುಗಳಿಂದ ಸರ್ಜಿ ಹೃದ್ರೋಗ ವಿಭಾಗ ಲೋಕಾರ್ಪಣೆ

ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರಚಿಕಿತ್ಸೆಗೆ ನೆರವಾಗುವ ಆಶಾ ಕಾರ್ಯಕರ್ತೆಯರಿಗೆ 250 ರೂ. ಗೌರವಧನ ನೀಡಲಾಗುತ್ತಿದೆ. ಇಂತಹ ಶಸ್ತ್ರ ಚಿಕಿತ್ಸೆಯನ್ನು ಕೆ.ಸಿ. ಜನರಲ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಸಂಸ್ಥೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು – ಬಿಎಂಸಿಆರ್ ಐ, ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ 20 ಆಸ್ಪತ್ರೆಗಳಲ್ಲಿ ಸುಸಜ್ಜಿತ ಶಸ್ತ್ರಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇನ್ನಷ್ಟು ಆಸ್ಪತ್ರೆಗಳನ್ನು ಉಚಿತ ಶಸ್ತ್ರಚಿಕಿತ್ಸೆಗಾಗಿ ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು.
ಕಿವುಡುತನ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (ಎನ್.ಪಿ.ಪಿ.ಸಿ.ಡಿ.)ದಡಿ ಕಾರ್ಯನಿರ್ವಹಿಸುವ ಶ್ರವಣಶಾಸ್ತ್ರ ತಂಡಗಳು ರಾಷ್ಟ್ರೀಯ ಬಾಲ ಸುರಕ್ಷಾ ಕಾರ್ಯಕ್ರಮ (ಆರ್.ಬಿ.ಎಸ್.ಕೆ.)ದಡಿ ಸಂಚಾರಿ ಆರೋಗ್ಯ ತಂಡಗಳ ಸಹಯೋಗದೊಂದಿಗೆ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಗುರುತಿಸಲಾದ ಅರ್ಹ ಮಕ್ಕಳನ್ನು ಹೆಚ್ಚಿನ ಮೌಲ್ಯಮಾಪನ ಮತ್ತು ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

62 ಮಕ್ಕಳಿಗೆ ಶಸ್ತ್ರಚಿಕಿತ್ಸೆ
ರಾಜ್ಯದಲ್ಲಿ ಪ್ರಸ್ತುತ ಇಂತಹ 652 ಮಕ್ಕಳನ್ನು ಗುರುತಿಸಿದ್ದು, ಈ ಪೈಕಿ 586 ಮಕ್ಕಳು ವಿವಿಧ ಹಂತಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 62 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, 258 ಮಕ್ಕಳ ಮೇಲೆ ನಿಗಾ ವಹಿಸಲಾಗಿದೆ. 142 ಮಕ್ಕಳು ಶ್ರವಣ ಸಾಧನ ಅಳವಡಿಕೆ ಚಿಕಿತ್ಸೆ ಪಡೆಯುತ್ತಿವೆ ಎಂದು ಸಚಿವರು ಮಾಹಿತಿ ನೀಡಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಬೆಂಗಳೂರುಶಿಕ್ಷಣ ಸಚಿವ ಡಾ. ಕೆ. ಸುಧಾಕರ್
Share203Tweet123Send
Previous Post

ಶೃಂಗೇರಿ ಜಗದ್ಗುರುಗಳಿಂದ ಸರ್ಜಿ ಹೃದ್ರೋಗ ವಿಭಾಗ ಲೋಕಾರ್ಪಣೆ

Next Post

ಮನಸೊರೆಗೊಂಡ ಆಳ್ವಾಸ್ ಸಾಂಸ್ಕೃತಿಕ ವೈಭವ: ವಿವಿಧ ನೃತ್ಯ ಪ್ರಕಾರಗಳ ಅನಾವರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನಸೊರೆಗೊಂಡ ಆಳ್ವಾಸ್ ಸಾಂಸ್ಕೃತಿಕ ವೈಭವ: ವಿವಿಧ ನೃತ್ಯ ಪ್ರಕಾರಗಳ ಅನಾವರಣ

ಮನಸೊರೆಗೊಂಡ ಆಳ್ವಾಸ್ ಸಾಂಸ್ಕೃತಿಕ ವೈಭವ: ವಿವಿಧ ನೃತ್ಯ ಪ್ರಕಾರಗಳ ಅನಾವರಣ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL