ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೊರೊನಾಗೆ #Corona ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಯಿತು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ #Minister Sharanaprakash Patil ತಿಳಿಸಿದ್ದಾರೆ.
ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಸಚಿವ ಡಾ. ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ ಎಂದು ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
- ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
- ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.
- ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
- ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
- ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
- ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.
ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.
SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ

ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸದಂತೆ ಪೋಷಕರು ಕ್ರಮ ವಹಿಸಲು , ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ, ಎಂತಹುದೇ ಪರಿಸ್ಥಿತಿ ಎದುರಿಸಲು. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಬೇಕು.
ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಿಸಬೇಕು.

ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ.
ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ
ವ್ಯಾಕ್ಸಿನ್ ಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು.
ಸಾಮಾಜಿಕ ಮಾಧ್ಯಮಗಳಲ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮುಖ್ಯಮಂತ್ರಿಗಳು ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post