No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ | ಸಚಿವ ಶರಣ್ ಪ್ರಕಾಶ್ ಪಾಟೀಲ್

kalpa News by kalpa News
May 27, 2025
in ಬೆಂಗಳೂರು ನಗರ
0
ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಕೊರೊನಾಗೆ #Corona ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಯಿತು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ #Minister Sharanaprakash Patil ತಿಳಿಸಿದ್ದಾರೆ.

ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಸಚಿವ ಡಾ. ಪಾಟೀಲ್‌ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ ಎಂದು ಸಚಿವರಾದ ಡಾ. ಶರಣ್‌‌ ಪ್ರಕಾಶ್‌ ಪಾಟೀಲ್‌ ತಿಳಿಸಿದರು.

  • ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
  • ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.
  • ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
  • ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
  • ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
  • ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಸಿಎಂ ಸೂಚನೆ

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ
ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು

ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸದಂತೆ ಪೋಷಕರು ಕ್ರಮ ವಹಿಸಲು , ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ, ಎಂತಹುದೇ ಪರಿಸ್ಥಿತಿ ಎದುರಿಸಲು. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಬೇಕು.

ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಿಸಬೇಕು.
ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.

ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.

ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ.
ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ
ವ್ಯಾಕ್ಸಿನ್ ಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು.

ಸಾಮಾಜಿಕ ಮಾಧ್ಯಮಗಳಲ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: BangaloreCoronaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Sharanaprakash PatilNews_in_KannadaNews_Kannadaಕೊರೊನಾಬೆಂಗಳೂರುಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ: ಸಿಎಂ

Next Post

ಭಾರತದ ನಾಗರಿಕರ ಮೇಲೆ ದಾಳಿ | ಪಾಕಿಸ್ತಾನಕ್ಕೆ ದಿಟ್ಟ ಪ್ರತಿಕ್ರಿಯೆ

kalpa News

kalpa News

Next Post
ಭಾರತದ ನಾಗರಿಕರ ಮೇಲೆ ದಾಳಿ | ಪಾಕಿಸ್ತಾನಕ್ಕೆ ದಿಟ್ಟ ಪ್ರತಿಕ್ರಿಯೆ

ಭಾರತದ ನಾಗರಿಕರ ಮೇಲೆ ದಾಳಿ | ಪಾಕಿಸ್ತಾನಕ್ಕೆ ದಿಟ್ಟ ಪ್ರತಿಕ್ರಿಯೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL