No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

ಅತುರದ ಕ್ರಮ ಕೈಗೊಳ್ಳುವುದಿಲ್ಲ- ಅರಣ್ಯ, ಪರಿಸರ ಸಚಿವರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 31, 2023
in ಬೆಂಗಳೂರು ನಗರ
0
ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದ ತಾವು, “ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ’’ ಎಂದು ಹೇಳಿದ್ದೇ ಹೊರತು ‘ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’ ಎಂದು ಹೇಳಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ Minister Eshwara Khandre ಸ್ಪಷ್ಟಪಡಿಸಿದ್ದಾರೆ.

ಆ ಕಾರ್ಯಕ್ರಮದಲ್ಲಿ ಕೆಲವರು ಪಶ್ಚಿಮ ಘಟ್ಟದ ಬಗ್ಗೆ ಮತ್ತು ಕಸ್ತೂರಿ ರಂಗನ್ ವರದಿ ಕುರಿತಂತೆ ನನಗೆ ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಸಂಜಯ್ ಕುಮಾರ್ ನೇತೃತ್ವದ ಪುನರ್ ಪರಿಶೀಲನಾ ಸಮಿತಿ ರಚಿಸಿದ್ದು, ಸಮಿತಿ ಸದಸ್ಯರು ತಮ್ಮನ್ನು ಇತ್ತೀಚೆಗೆ ಭೇಟಿ ಮಾಡಿದ್ದರು, ಈ ಸಮಿತಿ ಡಿಸೆಂಬರ್ ವೇಳೆಗೆ ವರದಿ ಸಲ್ಲಿಸಲಿದ್ದು, ಆ ವರದಿ ಬಂದ ಬಳಿಕ ಸಂಪುಟದ ಉಪ ಸಮಿತಿಯಲ್ಲಿ ಅದರ ಸಾಧಕ ಬಾಧಕ ಚರ್ಚಿಸಿ, ಪಶ್ಚಿಮಘಟ್ಟದ ಎಲ್ಲ ಬಾಧ್ಯಸ್ಥರೊಂದಿಗೆ (Stake holders) ಮಾತುಕತೆ ನಡೆಸಿ ನಂತರ ಸರ್ಕಾರ ವರದಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ 10 ವರ್ಷಗಳಷ್ಟು ಹಳೆಯದಾಗಿದೆ. ಇಂದಿಗೆ ಅದು ಪ್ರಸ್ತುತವೇ ಎಂಬ ವಾದವೂ ಇದೆ. ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿದರೆ ಜೀವನ, ಜೀವನೋಪಾಯಕ್ಕೆ ತೊಂದರೆ ಆಗುತ್ತದೆ ಎಂಬ ಭೀತಿಯೂ ಆ ಭಾಗದ ಜನರಲ್ಲಿದೆ. ಹೀಗಾಗಿ ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಸರ್ಕಾರ ಯಾವುದೇ ಆತುರದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Also read: ಬಿಗ್ ಶಾಕ್! ನಾಳೆಯಿಂದ ನಂದಿನಿ ಹಾಲು-ಮೊಸರಿನ ದರ ಏರಿಕೆ | ಎಷ್ಟು ಹೆಚ್ಚಳ?

ಪಶ್ಚಿಮ ಘಟ್ಟದಲ್ಲಿ ಕೆಂಪು ಪ್ರವರ್ಗದ (Red category) ಕೈಗಾರಿಕೆಗಳು ನಡೆಯಬಾರದು, ಅದರ ತ್ಯಾಜ್ಯ ಪಶ್ಚಿಮ ಘಟ್ಟದ ಜಲ ಮೂಲಗಳಿಗೆ ಅಪಾಯ ತಂದೊಡ್ಡುತ್ತದೆ ಎಂಬ ಆತಂಕ ಇದೆ. ಅದು ಸರಿ ಎನಿಸುತ್ತದೆ. ಆದರೆ, ಅಂಗನವಾಡಿ, ಆಸ್ಪತ್ರೆ, ಶಾಲೆ, ಜನವಸತಿ, ಮೂಲಸೌಕರ್ಯ ವಿಚಾರದಲ್ಲಿ ಹಾಗೆ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಇದರಿಂದ ಹಲವು ದಶಕದಿಂದ ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ಸ್ಥಳೀಯ ಜನರಿಗೆ ತೊಂದರೆ ಆಗುತ್ತದೆ. ಪರಿಸರವೂ ಉಳಿಯಬೇಕು, ಜನರ ಜೀವನೋಪಾಯಕ್ಕೂ ಧಕ್ಕೆ ಆಗಬಾರದು, ಸುಸ್ಥಿರ ಅಭಿವೃದ್ಧಿ ಸರ್ಕಾರದ ನಿಲುವು ಎಂದು ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯಲ್ಲಿ ಹಲವು ಸಡಿಲಿಕೆಗೂ ಸಂಜಯ್ ಕುಮಾರ್ ಸಮಿತಿ ಸಮ್ಮತಿಸುತ್ತಿದೆ. ವಿಶ್ವದ ಜೀವವೈವಿಧ್ಯತೆಯ 8 ಅದ್ಭುತ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಘಟ್ಟ ಉಳಿಸುವ ಜವಬ್ದಾರಿಯೂ ನಮ್ಮ ಮೇಲಿದೆ. ಆದರೆ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿರುವ ರೀತಿ ತಾವು ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರ ಮಾಡಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಪಶ್ಚಿಮಘಟ್ಟ ಮತ್ತು ಅಲ್ಲಿನ ಸಸ್ಯ ಸಂಕುಲ ಮತ್ತು ಪ್ರಾಣಿ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಹೇಳಿದ್ದ, ತಮ್ಮ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿ ಕೆಲವು ಮಾಧ್ಯಮಗಳಲ್ಲಿ ಮಾತ್ರ ಈ ರೀತಿ ವರದಿ ಪ್ರಕಟಿಸಲಾಗಿದೆ. ಈ ಬಗ್ಗೆ ಬೀದರ್ ನಲ್ಲಿ ನಿನ್ನೆ ನಡೆದ ಪತ್ರಿಕಾ ದಿನಾಚರಣೆಯಲ್ಲೂ ತಾವು ಸ್ಪಷ್ಟೀಕರಣ ನೀಡಿದ್ದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Eshwara KhandreNewsinKannadaNewsKannadaಬೆಂಗಳೂರುಸಚಿವ ಈಶ್ವರ ಖಂಡ್ರೆ
Share202Tweet123Send
Previous Post

ಬಿಗ್ ಶಾಕ್! ನಾಳೆಯಿಂದ ನಂದಿನಿ ಹಾಲು-ಮೊಸರಿನ ದರ ಏರಿಕೆ | ಎಷ್ಟು ಹೆಚ್ಚಳ?

Next Post

ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ವಿಪ್ರತೃಯಿ ಪರಿಷತ್ ಸಕಲ ನೆರವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ವಿಪ್ರತೃಯಿ ಪರಿಷತ್ ಸಕಲ ನೆರವು

ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ವಿಪ್ರತೃಯಿ ಪರಿಷತ್ ಸಕಲ ನೆರವು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL