ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರ ರೈತರಿಂದ ಸಾಲ ವಸೂಲಿ ನಿಲ್ಲಿಸಿ, ಹೊಸ ಸಾಲ ಮಂಜೂರು ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Basavaraja Bommai ಆಗ್ರಹಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡಿಗಡೆ ಮಾಡಿಲ್ಲ. ರೈತರಿಗೆ ಬೆಳೆ ಇಲ್ಲ, ಕುಡಿಯುವ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಸರ್ಕಾರ ಇದುವರೆಗೂ ಬಿಡಿಗಾಸು ಬಿಡುಗಡೆ ಮಾಡಿಲ್ಲ. ಕೇಂದ್ರದ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ ಎಂದು ಕಿಡಿ ಕಾರಿದರು.
ಹಿಂದೆ ಪ್ರವಾಹ ಬಂದಾಗ ನಾವು ಒಂದು ತಿಂಗಳಲ್ಲಿ ಡಿಬಿಟಿ ಮುಖಾಂತರ ರೈತರಿಗೆ ಸುಮಾರು 2000 ಕೋಟಿ ರೂ. ಬಿಡುಗಡೆ ಮಾಡಿದ್ದೆವು. ಅವರು ಕೇವಲ 2000 ಸಾವಿರ ನೀಡುತ್ತೇನೆ ಎನ್ನುತ್ತಾರೆ. ಇದು ರೈತರಿಗೆ ಅವಮಾನ ಮಾಡಿದಂತೆ ಎಂದರು.
ಕೇಂದ್ರದ ನಿಯಮಂತಾದರೂ ಒಣ ಬೇಸಾಯಕ್ಕೆ ಪ್ರತಿ ಹೆಕ್ಟೇರ್ ಗೆ ಕನಿಷ್ಟ 6000 ರೂ, ನೀರಾವರಿಗೆ 18 ಸಾವಿರ ರೂ. ನೀಡುವ ಕೆಲಸ ಮಾಡಬೇಕು. ನಾವು ರೈತರಿಗೆ ಕಿಸಾನ್ ಸಮ್ಮಾನ್ ನೀಡುತ್ತಿದ್ದೇವು ಅದನ್ನು ನಿಲ್ಲಿಸಿದ್ದಾರೆ. ರೈತರಿಂದ ಸಾಲ ವಸೂಲಿ ನಿಲ್ಲಿಸಬೇಕು. ಕೂಡಲೆ ಹೊಸ ಸಾಲ ನೀಡುವ ವ್ಯವಸ್ಥೆ ಮಾಡಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಹೈಕಮಾಂಡ್ ಮಾತನಾಡುತ್ತಾರೆ
ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ ಹೈಕಮಾಂಡ್ ಗೆ ಎಲ್ಲವೂ ಗೊತ್ತಿದೆ. ಅವರು ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗುವುದಾಗಿ ಹೇಳಿದ್ದಾರೆ. ಹೈಕಮಾಂಡ್ ಅವರನ್ನು ಕರೆದು ಮಾತನಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಷಯಕ್ಕೂ ಹೈಕಮಾಂಡ್ ಮಾತನಾಡುತ್ತದೆ ಎಂದರು.
Also read: ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ | ಜಿಲ್ಲಾ ಲಿಬರ್ಟಿ ಕ್ವೀನ್ಸ್ ಅಕಾಡೆಮಿಗೆ ಹಲವು ಬಹುಮಾನ
ಮಾಜಿ ಸಚಿವ ಗೂಳುಹಟ್ಟಿ ಶೇಖರ್ ಅವರ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆ ತಪ್ಪು ಕಲ್ಪನೆಯಿಂದ ಕೂಡಿದೆ. ಸಂಘದಲ್ಲಿ ದಲಿತ ಸಮುದಾಯವರೂ ಎತ್ತರ ಮಟ್ಟದಲ್ಲಿದ್ದಾರೆ ಎಂದರು.
ಡಿಕೆಶಿ ಉತ್ತರಿಸಲಿ
ಇನ್ನು ಡಿಸಿಎಂ ಡಿಕೆ ಶಿವಕುಮಾರ್ DCMDKShivakumar ಅಧಿವೇಶನದಲ್ಲಿ ಪಾಲ್ಗೊಳ್ಳದೆ ತೆಲಂಗಾಣ ರಾಜಕೀಯದಲ್ಲಿ ಸಕ್ರೀಯ ರಾಗಿದ್ದಾರೆ. ರಾಜ್ಯದ ಜನರ ಸಮಸ್ಯೆ ಮುಖ್ಯಾನೊ ರಾಜಕೀಯ ಮುಖ್ಯಾನೋ ಎನ್ನುವುದನ್ನು ಅವರೇ ಹೇಳಬೇಕು ಎಂದು ಆಗ್ರಹಿಸಿದರು.
(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















