ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಎಸ್‌ವೈ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ (30) ಬೆಂಗಳೂರಿನ ಎಮ್‌ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇಂದು ವಸಂತ ನಗರದಲ್ಲಿರುವ ತಮ್ಮ ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ ಡಾ.ನೀರಜ್ ಎನ್ನುವವರೊಂದಿಗೆ ಸೌಂದರ್ಯ ವಿವಾಹವಾಗಿತ್ತು. ಆಕೆಗೆ ಒಂದು ಪುಟ್ಟ ಮಗುವೂ ಸಹ ಇತ್ತು.
ಇವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಘಟನೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಡಿಯೂರಪ್ಪನವರ ನಿವಾಸಕ್ಕೆ ತೆರಳಿದ್ದು, ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post