No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಹಕಾರ: ನಿರ್ಮಲಾ ಸೀತಾರಾಮನ್

ವಿಜ್ಞಾನ-ವ್ಯಾಪಾರ-ಉದ್ಯಮಶೀಲತೆ-ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 3, 2021
in ಬೆಂಗಳೂರು ನಗರ
0
ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಹಕಾರ: ನಿರ್ಮಲಾ ಸೀತಾರಾಮನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ ಹಾಗೂ ಶೈಕ್ಷಣಿಕ ವಲಯಗಳ ನಡುವಿನ ಸಮನ್ವಯತೆಯಿಂದ ಜನರ ಬದುಕಿನ ಮಟ್ಟ ಸುಧಾರಿಸಲು ಮೋದಿ ನೇತೃತ್ವದ ಸರ್ಕಾರ ಒತ್ತು ನೀಡಿದೆ ಎಂದರು.

ರಾಜ್ಯದ ಐಟಿ/ಬಿಟಿ ಮತ್ತು ವಿಜ್ಞಾನ & ತಂತ್ರಜ್ಞಾನ ಇಲಾಖೆಯು ಜೈವಿಕ ತಂತ್ರಜ್ಞಾನ ಉದ್ಯಮಿಗಳು ಹಾಗೂ ಸ್ಟಾರ್ಟ್ ಅಪ್ ಪ್ರಮುಖರೊಂದಿಗೆ ಶುಕ್ರವಾರ ಎಲೆಕ್ಟ್ರಾನಿಕ್ ‌ಸಿಟಿಯ ಜೈವಿಕ ತಂತ್ರಜ್ಞಾನ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಯಾವುದೇ ವೈಜ್ಞಾನಿಕ ಸಾಧನೆಗೆ ಜೀವ ವಿಜ್ಞಾನಗಳೇ ಬುನಾದಿ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಜೀವ ವಿಜ್ಞಾನ ಹಾಗೂ ಜೈವಿಕ ತಾಂತ್ರಿಕತೆಯ ಬೆಳವಣಿಗೆಗೆ ದೇಶದಲ್ಲೇ ಮಾದರಿ ಎನ್ನಿಸುವಂತಹ ವಾತಾವರಣ ಸೃಷ್ಟಿಸಿದೆ ಎಂದರು.

ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವೈಜ್ಞಾನಿಕ ಸಂಶೋಧನೆಗಳ ನಡುವೆ ಸಮನ್ವಯತೆ ಉಂಟುಮಾಡುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ಇದೇ ವೇಳೆ, ಯಾವುದೇ ಅಭಿಪ್ರಾಯ, ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು. ವೈಜ್ಞಾನಿಕ ಹಾಗೂ ತಾಂತ್ರಿಕ ಸಂಶೋಧನೆಗಳನ್ನು ಪ್ರೋತ್ಸಾಹಿಸುವುದೇ ಸರ್ಕಾರದ ಅಂತಿಮ ಉದ್ದೇಶ ಎಂದು ಸೀತಾರಾಮನ್ ಸ್ಪಷ್ಟಪಡಿಸಿದರು.

ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿ, ಕರ್ನಾಟಕವು ಮಾಹಿತಿ ತಂತ್ರಜ್ಞಾನ ರಾಜಧಾನಿ ಮಾತ್ರವಲ್ಲದೇ ಜೈವಿಕ ತಂತ್ರಜ್ಞಾನದ ತವರೂ ಆಗಿದೆ; ಕಿಣ್ವಗಳು (ಎಂನ್ಸೆಮ್ಸ್), ಬಯೋಫಾರ್ಮಾ, ಬಯೋಫಾರ್ಮಸ್ಯೂಟಿಕಲ್, ಸಸ್ಯ ಆನುವಂಶೀಯತೆ, ವಂಶವಾಹಿನಿಗಳ ಅನುಕ್ರಮಣಿಕೆ, ಜೈವಿಕ ಸಂಸ್ಕರಣೆಗೆ ಸಂಬಂಧಿಸಿದ ಆವಿಷ್ಕಾರಗಳಿಗೆ ಬೆಂಗಳೂರು ಪ್ರಮುಖ ಕಾರ್ಯನೆಲೆಯಾಗಿದೆ ಎಂದರು.

ಈ ಕ್ಷೇತ್ರವು ಹೆಚ್ಚಿನ ಉದ್ಯೋಗ ಸೃಷ್ಟಿಸುವ ಜೊತೆಗೆ ಉತ್ಪಾದಕತೆ ಹಾಗೂ ಸಮೃದ್ಧಿಯನ್ನು ಹೆಚ್ಚಿಸುತ್ತದೆ. ಆಹಾರ ಭದ್ರತೆ, ಆರೋಗ್ಯಸೇವೆ, ಶುದ್ಧ ಇಂಧನ, ಸ್ವಚ್ಛ ಪರಿಸರ ಇತ್ಯಾದಿ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಜೊತೆಗೆ, ಕೋವಿಡ್-19 ಸೋಂಕಿನ ಸನ್ನಿವೇಶದ ನವೋದ್ಯಮಗಳಿಗೆ ಹೊಸ ಅವಕಾಶಗಳನ್ನು ಉಂಟುಮಾಡಿವೆ. ಇದಕ್ಕೆ ಪೂರಕವಾಗಿ, ರಾಜ್ಯವು ಸ್ಪರ್ಧಾತ್ಮಕ ಸಂಸ್ಥೆಯ (ಐಎಫ್ ಸಿ) ಸಹಭಾಗಿತ್ವದಲ್ಲಿ ‘ಕರ್ನಾಟಕ ನಾವೀನ್ಯತಾ ಒಳನೋಟ-2030’ ಹೊರತರಲು ತಯಾರಿ ನಡೆಸುತ್ತಿದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ರಾಜಸ್ವ ಕಾರ್ಯದರ್ಶಿ ತರುಣ್ ಬಜಾಜ್ ಅವರು ಸಾಧನೆ ಆಧಾರಿತ ಪ್ರೋತ್ಸಾಹಕಗಳು, ಸಂಶೋಧನಾ & ಅಭಿವೃದ್ಧಿ ವೆಚ್ಚಗಳು ಹಾಗೂ ತೆರಿಗೆ ಸಂಬಂಧಿತ ವಿಷಯಗಳ ಕುರಿತು ವಿವರಿಸಿದರು.

ರಾಜ್ಯ ಜೈವಿಕ ತಂತ್ರಜ್ಞಾನ ಕಾರ್ಯಪಡೆ ಅಧ್ಯಕ್ಷೆ ಕಿರಣ್‌ ಮಜುಂದಾರ್‌ ಶಾ, ಕೇಂದ್ರದ ಕಂದಾಯ ಇಲಾಖೆ ಕಾರ್ಯದರ್ಶಿ ತರುಣ್‌ ಬಜಾಜ್‌, ಬಯೋ ಇನೋವೇಷನ್‌ ಸೆಂಟರ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಜಿತೇಂದ್ರ ಕುಮಾರ್‌, ಸಿ ಕ್ಯಾಂಪ್‌ ಸಿಇಒ ಡಾ.ತಸ್ಲೀಮಾರಿಫ್‌ ಸೈಯ್ಯದ್‌, ಹೆಚ್ಚುವರಿ ಮುಖ್ಯ ಕಾಯ್ರದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಐಟಿ ನಿರ್ದೇಶಕಿ ಮೀನಾ ನಾಗರಾಜ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಂವಾದ ಕಾರ್ಯಕ್ರಮಕ್ಕೂ ಮುನ್ನ ಕೇಂದ್ರ ಸಚಿವೆ ನಿರ್ಮಾಲಾ ಅವರು ಅಶ್ವತ್ಥ ನಾರಾಯಣ ಅವರೊಂದಿಗೆ ವಿವಿಧ ಸ್ಟಾರ್ಟ್ ಅಪ್ ಗಳು ಅಭಿವೃದ್ಧಿಪಡಿಸಿರುವ ಸುಮಾರು 20ಕ್ಕೂ ಹೆಚ್ಚು ನಾವೀನ್ಯತಾ ಉತ್ಪನ್ನಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Nirmala SitharamanNews in KannadaNews KannadaState Newsಬೆಂಗಳೂರುಸಚಿವೆ ನಿರ್ಮಲಾ ಸೀತಾರಾಮನ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರದ ವೈವಿಧ್ಯತೆ ಬಗ್ಗೆ ಶಾಸಕ ಹಾಲಪ್ಪರಿಂದ ವಿಶೇಷ ಮಾಹಿತಿ…

Next Post

ಹಿರಿಯ ಗಾಂಧಿವಾದಿ ನಾರಾಯಣ್ ಭಟ್ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿರಿಯ ಗಾಂಧಿವಾದಿ ನಾರಾಯಣ್ ಭಟ್ ನಿಧನ

ಹಿರಿಯ ಗಾಂಧಿವಾದಿ ನಾರಾಯಣ್ ಭಟ್ ನಿಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ananta Hegde Ashisara Soraba

1300 ಕೆರೆಗಳಲ್ಲಿ 500 ಒತ್ತುವರಿ | ಸೊರಬದಲ್ಲಿ ಗಂಭೀರ ಪರಿಸ್ಥಿತಿ | ಅನಂತ ಹೆಗಡೆ ಅಶಿಸರ

June 21, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL