ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಧಾನಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ನಂತರ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಜ.29ರವರೆಗೂ ಶಾಲೆಗಳನ್ನು ಆರಂಭಿಸುವುದಿಲ್ಲ. ಇದನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತದೆ.
ಯಾವ ಶಾಲೆಯಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಬಂದರೆ ಏಳು ದಿನ, ಕಡಿಮೆ ಪ್ರಕರಣ ಪತ್ತೆಯಾದರೆ ಮೂರು ದಿನ ಅಂತಹ ಶಾಲೆಯನ್ನು ಮುಚ್ಚಲು ಸೂಚಿಸಲಾಗಿದೆ.
ಇದರ ಹೊರತಾಗಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಶಾಲೆಗಳನ್ನು ಆರಂಭಿಸಲಾಗುತ್ತದೆ. ಬೆಂಗಳೂರು ಶಾಲೆಗಳಿಗೆ ಸಂಬಂಧಿಸಿದಂತೆ ಮುಂದಿನ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post