No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಳ್ಳಿಗಳಲ್ಲಿಯೂ ನಗರ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ: ರಾಘವೇಶ್ವರ ಶ್ರೀ

ಬೆಂಗಳೂರು | ಗಿರಿನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ಗೋದೀಪ - ದೀಪಾವಳಿ ಗೋಪೂಜೆ 

kalpa News by kalpa News
October 24, 2025
in ಬೆಂಗಳೂರು ನಗರ
0
ಹಳ್ಳಿಗಳಲ್ಲಿಯೂ ನಗರ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹಳ್ಳಿಗಳು ಹಾಗೂ ಹಳ್ಳಿಗರು ಬೆಂಗಳೂರನ್ನು ಸೇರುತ್ತಾ ಸಾಗಿದಂತೆ ಬೆಂಗಳೂರು ದೊಡ್ಡದಾಗುತ್ತಾ ಹೋಗಿದೆ. ನಾವು ಹಳ್ಳಿಗಳನ್ನು ಮಾತ್ರ ಬಿಟ್ಟುಬಂದಿಲ್ಲ, ಈ ಮಾಯಾ ನಗರಿಗೆ ಬರುವಾಗ ನಮ್ಮ ಸಂಸ್ಕೃತಿಯನ್ನೂ ಬಿಟ್ಟು ಬಂದಿರುವುದು ದುರಂತ. ಇಂದು ಹಳ್ಳಿಗಳಲ್ಲಿಯೂ ಕೂಡ ನಗರದ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ ಎಂದು ಶ್ರೀರಾಮಚಂದ್ರಾಪುರಮಠದ
ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು #Raghaveshwara Shri ಹೇಳಿದರು.

ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ #Ramachandrapura Mutt ಶಾಖೆಯಲ್ಲಿ ನಡೆದ ‘ಗೋದೀಪ – ದೀಪಾವಳಿ ಗೋಪೂಜೆ’ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಗೋಸಂದೇಶ ನೀಡಿದ ಶ್ರೀಗಳು, ಭಗವಾನ್ ಶ್ರೀಕೃಷ್ಣನು ಗೋಪೂಜೆಯ ಪ್ರವರ್ತಕನಾಗಿದ್ದು, ಗೋವು ಜನರ ಜೀವನದ ಆಧಾರವಾದ್ದರಿಂದ ಗೋವಿಗೆ ಪೂಜೆ ಸಲ್ಲಬೇಕು ಎಂದು ಭಾಗವತದಲ್ಲಿ ಶ್ರೀಕೃಷ್ಣ ಹೇಳಿದ್ದಾನೆ. ನಮ್ಮ ಜೀವನದಲ್ಲಿ ಗೋವನ್ನು ತಂದರೆ ಅದೇ ನಿಜವಾದ ಗೋಪೂಜೆಯಾಗಿದ್ದು, ಗೋವನ್ನು ನಮ್ಮ ಜೀವನದ ಜೋಡಿಸಿಕೊಳ್ಳಬೇಕು. ಆದರೆ ಗೋವಿನ ಮರಣವನ್ನು ನಮ್ಮ ಜೀವನದಲ್ಲಿ ಜೋಡಿಸಿಕೊಂಡಿರುವುದು ದುರಂತವಾಗಿದೆ ಎಂದರು.
ಪೇಟೆಯಲ್ಲಿ ಗೋಪೂಜೆ ಮಾಡಲು ಗೋವು ಇಲ್ಲ ಹಾಗೂ ಪೂಜೆ ಮಾಡುವ ಮನಸ್ಸು ಇಲ್ಲಾ ಎಂಬಂತಾಗಿದೆ. ಈ ಕುರಿತಾಗಿ ಜಾಗೃತಿ ಮೂಡಿಸಲು ಇಂದು ವಿವಿಧ ಕ್ಷೇತ್ರಗಳ ಗಣ್ಯರಿಂದ ಪೂಜೆ ನಡೆಸಲಾಗಿದೆ. ಈ ಸಂಸ್ಕೃತಿ ಮತ್ತಷ್ಟು ಬೆಳೆಯಲಿ ಎಂದು ಆಶಿಸಿದರು.

ಸಂಸದ ತೇಜಸ್ವಿ ಸೂರ್ಯ #MP Tejaswi Surya ಮಾತನಾಡಿ, ಮದುವೆಯಾದ ನಂತರ ಮೊದಲ ದೀಪಾವಳಿಯನ್ನು ಗೋಪೂಜೆಯೊಂದಿಗೆ ಶ್ರೀರಾಮಚಂದ್ರಾಪುರ ಮಠದಲ್ಲಿ ಆಚರಿಸುತ್ತಿರುವುದು ನಮ್ಮ ಪಾಲಿನ ಭಾಗ್ಯವಾಗಿದೆ. ದೇಶದಲ್ಲಿ ಗೋಸಂರಕ್ಷಣೆಗೆ ಶ್ರೀಗಳ ಕೊಡುಗೆ ಅಪಾರವಾಗಿದ್ದು, ಬೆಂಗಳೂರು ನಗರದಲ್ಲಿ ದೇಶಿ ಗೋತಳಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಅವಕಾಶ ಲಭಿಸಿದ್ದು ಧನ್ಯತೆಯ ಕ್ಷಣವಾಗಿದೆ. ನಾನು ವೇದ ಮಂತ್ರಗಳನ್ನು ಕಲಿತಿದ್ದು ಶ್ರೀರಾಮಚಂದ್ರಾಪುರ ಮಠದಲ್ಲಿ. ನಮ್ಮ ಕುಟುಂಬದಲ್ಲಿ ಯಾವುದೇ ಶುಭಕಾರ್ಯವಾದರೂ ಇಲ್ಲಿ ಪೂಜೆ ಸಲ್ಲಿಸಿಯೇ ಆರಂಭಿಸುತ್ತೇವೆ. ಮಂದಹಾಸದ ಶ್ರೀಗಳ ಕೃಪಾದೃಷ್ಟಿಯೇ ನಮ್ಮೆಲ್ಲರ ನೋವುಗಳನ್ನು ಪರಿಹರಿಸುತ್ತದೆ ಎಂದರು.
ಇದಕ್ಕೂ ಮೊದಲು ವಿಶ್ರಾಂತ ಮುಖ್ಯ ನ್ಯಾಯಾಧೀಶ ಪಿ.ಎಸ್. ದಿನೇಶ್ ಕುಮಾರ್ ದಂಪತಿಗಳು, ಸಂಸದ ತೇಜಸ್ವೀ ಸೂರ್ಯ ದಂಪತಿಗಳು, ಶಾಸಕ ರವಿಸುಬ್ರಹ್ಮಣ್ಯ ಎಲ್. ಎ. ದಂಪತಿಗಳು, ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ಎಮ್ ದಂಪತಿಗಳು, ಖ್ಯಾತ ಲೇಖಕ, ಚಿಂತಕ ಡಾ. ನಾ. ಸೋಮೇಶ್ವರ ದಂಪತಿಗಳು, ರಿಪಬ್ಲಿಕ್ ನ್ಯೂಸ್ ಕನ್ನಡದ ಸಂಪಾದಕಿ ಶೋಭಾ ಮಲವಳ್ಳಿ ದಂಪತಿಗಳು, ಸಂಸ್ಕೃತಿ ಚಿಂತಕಿ ಡಾ| ಆರತಿ ವಿ. ಬಿ. ದಂಪತಿಗಳು, ವಿದ್ವಾನ್ ಶ್ರೀಕಂಠ ಶಾಸ್ತ್ರೀ ದಂಪತಿಗಳು, ವಿಕ್ರಮ ಪತ್ರಿಕೆ ಸಂಪಾದಕ ರಮೇಶ್ ದೊಡ್ಡಪುರ, ಗೋ ಸೇವಕ ಕುಮಾರ ಸುಬ್ರಹ್ಮಣ್ಯ ಜಾಗೀರ್ದಾರ್ ದಂಪತಿಗಳು, ಲಕ್ಷ್ಮೀನಾರಾಯಣ ಪ್ರಸಾದ ಪಕಳಕುಂಜ ದಂಪತಿಗಳು 10 ವಿವಿಧ ತಳಿಯ ಸಾಲಂಕೃತ ಗೋವುಗಳಿಗೆ ಏಕಕಾಲಕ್ಕೆ ಸಾಂಪ್ರದಾಯಿಕ ಗೋಪೂಜೆಯನ್ನು ಸಲ್ಲಿಸಿದರು. ಗೋಸೂಕ್ತ ಪಾರಾಯಣ, ಗೋಸೂಕ್ತ ಹವನ ನಡೆಯಿತು.

ಶಿವಶ್ರೀ ಸ್ಕಂದಪ್ರಸಾದ ಮತ್ತು ತಂಡದವರಿಂದ ನಡೆದ ‘ಗೋ ಗಾನಾಮೃತ’ ಸಂಗೀತ ಕಾರ್ಯಕ್ರಮ ಜನಮನ ರಂಜಿಸಿತು. ಹವ್ಯಕ ಮಹಾಮಂಡಲದ ಶಿಷ್ಯ ಮಾಧ್ಯಮ ಪ್ರಧಾನ ಪ್ರಮೋದ್ ಮೋಹನ್ ಹೆಗಡೆ ಶ್ರೀರಾಮಚಂದ್ರಾಪುರಮಠದಿಂದ ನಡೆದ ಗೋಸಂರಕ್ಷಣಾ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು. ರಂಜನಿ ಕೀರ್ತಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಬೆಳಗ್ಗೆಯಿಂದ ನಡೆದ ಸಾರ್ವಜನಿಕ ಗೋಪೂಜೆಯಲ್ಲಿ ನೂರಾರು ಗೋಪ್ರೇಮಿಗಳ ಭಾಗಿಗಳಾಗಿ ಪೂಜೆ ಹಾಗೂ ಗೋಗ್ರಾಸವನ್ನು ಸಮರ್ಪಿಸಿದರು.
ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಶಾಸನತಂತ್ರದ ಅಧ್ಯಕ್ಷರಾದ ಮೋಹನ್ ಭಾಸ್ಕರ ಹೆಗಡೆ, ಯೋಜನಾ ಖಂಡದ ಶ್ರೀಸಂಯೋಜಕ ವಿದ್ವಾನ್ ಜಗದೀಶಶರ್ಮಾ ಸಂಪ, ಗೋದೀಪ ಕಾರ್ಯಕ್ರಮದ ಸಂಚಾಲಕ ವಾದಿರಾಜ ಸಾಮಗ, ಸಹ ಸಂಚಾಲಕ ಶಂಕರ್ ಹಿರೇಗಂಗೆ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMP Tejaswi SuryaNews in KannadaNews KannadaRaghaveshwara shriRamachandrapura muttಬೆಂಗಳೂರುಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಶ್ರೀರಾಮಚಂದ್ರಾಪುರಮಠಸಂಸದ ತೇಜಸ್ವಿ ಸೂರ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

6 ತಿಂಗಳ ಮಗು ಕಿಡ್ನಾಪ್ | ಮೈಸೂರು RPF ಸಿಬ್ಬಂದಿ ಕಾರ್ಯಾಚರಣೆ | ಕೇವಲ 30 ನಿಮಿಷದಲ್ಲಿ ಪೋಷಕರ ಮಡಿಲಿಗೆ

Next Post

ರೈಲಿನಲ್ಲಿ ಪಟಾಕಿ ಸಾಗಾಟ | 34 ಮಂದಿ ಬಂಧನ | ನೈಋತ್ಯ ರೈಲ್ವೆಯಲ್ಲಿ ದಾಖಲಾದ ಪ್ರಕರಣವೆಷ್ಟು?

kalpa News

kalpa News

Next Post
ರೈಲಿನಲ್ಲಿ ಪಟಾಕಿ ಸಾಗಾಟ | 34 ಮಂದಿ ಬಂಧನ | ನೈಋತ್ಯ ರೈಲ್ವೆಯಲ್ಲಿ ದಾಖಲಾದ ಪ್ರಕರಣವೆಷ್ಟು?

ರೈಲಿನಲ್ಲಿ ಪಟಾಕಿ ಸಾಗಾಟ | 34 ಮಂದಿ ಬಂಧನ | ನೈಋತ್ಯ ರೈಲ್ವೆಯಲ್ಲಿ ದಾಖಲಾದ ಪ್ರಕರಣವೆಷ್ಟು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL