ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಸರಕಾರ ಕೊಬ್ಬರಿಗೆ ಬೆಂಬಲ ಬೆಲೆ ನೀಡಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು; ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ PMNarendraModi ಅವರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ

Also read: ಕಾನೂನು ಅನುಷ್ಠಾನವಾಗದಿದ್ದಾಗ ಪ್ರತಿಭಟನೆ ನಡೆಯುತ್ತವೆ: ಬಸವರಾಜ ಬೊಮ್ಮಾಯಿ
ತೆಂಗು ಬೆಳೆಗಾರರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೆಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರವನ್ನು, ಪ್ರಧಾನಿಗಳಲ್ಲಿ ವಿನಂತಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು











Discussion about this post