ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ತಪಾಸಣೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವೈದ್ಯರ ಸಲಹೆ ಮೇರೆಗೆ ಸೂಕ್ತ ಚಿಕಿತ್ಸೆಗಾಗಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ #Apollo Hospital ದಾಖಲಾಗಿದ್ದಾರೆ ಎನ್ನಲಾಗಿದೆ.
Also read: ಯುವ ಕೌಶಲ್ಯ ಉತ್ಸವ ನೃತ್ಯ ಸ್ಪರ್ಧೆ | ಜೆಎನ್‌ಎನ್‌ಸಿಇ ವಿದ್ಯಾರ್ಥಿಗಳು ರನ್ನರ್ ಅಪ್
ಕೆಲಸದ ಒತ್ತಡ, ನಿರಂತರ ಪ್ರವಾಸಗಳಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ಕುಮಾರಸ್ವಾಮಿಯವರು ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡು ಸ್ವಲ್ಪ ದಿನ ವಿಶ್ರಾಂತಿ ಪಡೆದು ನಂತರ ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post