ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರೈತ ಸಮುದಾಯದ ಪ್ರಭಾವಿ ನಾಯಕರಾಗಿದ್ದ ಬಾಬುಗೌಡ ಪಾಟೀಲ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ರೈತರ ಪರ ಧ್ವನಿಯಾಗಿ ನಾಡಿನ ಅನ್ನದಾತರ ಕಷ್ಟ- ನಷ್ಟಗಳಿಗೆ ಸದಾ ಸ್ಪಂಧಿಸುತ್ತಿದ್ದ ಅವರ ನಿಧನ ವಿಶೇಷವಾಗಿ ರೈತ ಸಮುದಾಯಕ್ಕೆ ತುಂಬಾಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ.
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಬಾಬುಗೌಡ ಪಾಟೀಲ್, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ರೈತರಿಗೆ ಸದಾ ಸ್ಪಂಧಿಸುತ್ತಿದ್ದ ಅಪರೂಪದ ಜನಪರ ಕಾಳಜಿಯುಳ್ಳ ನಾಯಕ ಎಂದು ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಿಂದ ದೇಶದ ಅನ್ನದಾತರು ಕವಲುದಾರಿಯಲ್ಲಿ ಇರುವಾಗಲೇ, ರೈತ ಪರ ನಾಯಕನೊಬ್ಬ ಆಗಲಿರುವುದು ನಿಜಕ್ಕೂ ಆಘಾತ ತಂದಿದೆ ಎಂದು ಹೇಳಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕುಮಾರಸ್ವಾಮಿ ಅವರು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post