ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೆಚ್ 3ಎನ್ 2 ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ Minister Sudhakar ತಿಳಿಸಿದರು.
ರಾಜ್ಯದಲ್ಲಿ 26 ಹೆಚ್ 3ಎನ್ 2 ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು, 65 ವರ್ಷಕ್ಕಿಂತ ಮೇಲ್ಪಟ್ಟವರು, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ಗರ್ಭಿಣಿಯರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ, ಅನವಶ್ಯಕವಾಗಿ ಗುಂಪು ಸೇರದಂತೆ ಮತ್ತು ಶುಚಿತ್ವದ ಕಡೆ ಗಮನ ಹರಿಸುವಂತೆ ಸಲಹೆ ನೀಡಲಾಗಿದೆ ಎಂದರು.
ಹೆಚ್ಚಿನ ದ್ರವಾಹಾರ ಸೇವಿಸಿ
ಬಿಸಿಗಾಳಿ ಮತ್ತು ತಾಪಮಾನ ಹೆಚ್ಚಳ ಕುರಿತು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಲಾಗಿದ್ದು, ಪ್ರತಿ ದಿನ 2ರಿಂದ 3 ಲೀಟರ್ ಸೇವಿಸುವ ಮೂಲಕ ದೇಹದಲ್ಲಿ ನೀರಿನ ಕೊರತೆಯಾಗದಂತೆ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಬಿರು ಬೇಸಿಗೆ ಸಂದರ್ಭದಲ್ಲಿ ಮಜ್ಜಿಗೆ, ಎಳನೀರು, ನಿಂಬೆ ಹಣ್ಣಿನ ರಸ ಸೇರಿದಂತೆ ಹೆಚ್ಚಿನ ದವಾಹಾರ ಸೇವಿಸುವಂತೆಯೂ ಜನರಿಗೆ ಸಲಹೆ ನೀಡಲಾಗಿದೆ ಎಂದರು.
Also read: ವಿಧ್ವಂಸಕ ಕೃತ್ಯಕ್ಕೆ ಸಂಚು ಹಿನ್ನೆಲೆ: ಆರೋಪಿಗಳಿಗಾಗಿ ಎನ್‌ಐಎ ತೀವ್ರ ಶೋಧ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post