ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕನ್ನಡದ ಪ್ರಾಚೀನ ಕೃತಿ ಯಶೋಧರ ಚರಿತೆಯ ಪ್ರಸಂಗ ಆಧರಿಸಿ ನಿರ್ಮಿಸಲಾಗಿರುವ ಅಮೃತಮತಿ ಚಿತ್ರ ಹಾಲಿವುಡ್ ಅಂತಾರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದ್ದು, ಮತ್ತೊಂದು ಪ್ರಶಸ್ತಿ ಲಭಿಸಿದೆ.
ಈ ಚಿತ್ರದ ನಟನೆಗಾಗಿ ನಟಿ ಹರಿಪ್ರಿಯಾ ಅವರಿಗೆ ಶ್ರೇಷ್ಠ ನಟಿ ಪ್ರಶಸ್ತಿಗೆ ಭಾಜನರಾಗಿದ್ದು, ಇದಕ್ಕೂ ಮುನ್ನ ನೋಯ್ಡಾದ ಎರಡು ಸಂಸ್ಥೆಗಳು ನಡೆಸಿದ ಎರಡು ಪ್ರತ್ಯೇಕ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಹರಿಪ್ರಿಯಾ ಶ್ರೇಷ್ಠ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಹೀಗಾಗಿ ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿರುವ ಈ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿ, ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣಗೊಂಡಿರುವ ಅಮೃತಮತಿ ಚಿತ್ರವು ಅಟ್ಲಾಂಟ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಗಳಿಸಿತ್ತು. ಲಾಸ್ ಏಂಜಲಿಸ್ ಸನ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಬರಗೂರರಿಗೆ ಶ್ರೇಷ್ಠ ಚಿತ್ರಕಥೆ ಪ್ರಶಸ್ತಿ ಲಭಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post