ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು #Prajwal Revanna ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
Also read: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್ ಕರೆದೊಯ್ದು ಮೈಸೂರಿನಲ್ಲಿ ಮಹಜರ್
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರನ್ನು ಎಸ್’ಐಟಿ ಕಸ್ಟಡಿಯಿಂದ ಇಂದೇ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಹೊಳೆನರಸೀಪುರ ಹಾಗೂ ಕೆಆರ್ ನಗರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ, ಪ್ರಜ್ವಲ್ ವಿರುದ್ಧದ ಇನ್ನೊಂದು ಪ್ರಕರಣದ ವಿಚಾರಣೆಗಾಗಿ ಅವರನ್ನು ಮತ್ತೆ ತಮ್ಮ ಕಸ್ಟಡಿಗೆ ಪಡೆಯಲು ಎಸ್’ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post