ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ Ayodhya Ramamandira ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ CMSiddaramaiah ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದ್ದು, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ RAshok ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ಕಚೇರಿ ಪೂಜೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Also read: ದೇಶದ ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಶ್ಲಾಘನೀಯ: ಶಾಸಕ ಚನ್ನಬಸಪ್ಪ ಅಭಿಪ್ರಾಯ
ಕಾರ್ಯಕರ್ತರ ಮೇಲೆ ಹಾಕಿದ ಕೇಸು ವಾಪಸ್ ಪಡೆಯಬೇಕು. ಹಳೆಯ ಪ್ರಕರಣ ಹೊರತೆಗೆದು ಬಂಧಿಸಲು ಪೊಲೀಸ್ ಇಲಾಖೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಇಂತಹ ದ್ವೇಷ ರಾಜಕಾರಣದ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅವರಿಗೆ ಕೇಸರಿ ಕಂಡರೆ ಆಗಲ್ಲ, ನಾಮ ಹಚ್ಚಿದರೆ ಸಮಸ್ಯೆ ಕಂಡುಬರುತ್ತದೆ. ಆದರೆ ಮಸೀದಿಯಲ್ಲಿ ಟೋಪಿ ಹಾಕಿಕೊಳ್ಳುತ್ತಾರೆ. ವೋಟಿಗಾಗಿ ಧರ್ಮ, ಜಾತಿ ಒಡೆಯುವುದು ಅವರ ಗುಣ. ಅವರ ರಕ್ತದ ಕಣದಲ್ಲೂ ಒಡೆಯುವ ಗುಣ ಇದೆ. ಬ್ರಿಟಿಷರ ಒಡೆಯುವ ಗುಣ ಕಾಂಗ್ರೆಸ್ ನ ಎಲ್ಲರಲ್ಲೂ ಇದೆ. ಈ ಹಿಂದೆ ವೀರಶೈವ ಲಿಂಗಾಯತರನ್ನು ಒಡೆಯುವ ಕೆಲಸ ಮಾಡಿದ್ದರು ಎಂದು ನೆನಪಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ನ ಶಾಸಕರೇ ಹೇಳಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಹೋದರೆ ಜನರು ಬಯ್ಯುತ್ತಿದ್ದಾರೆ. ಹೀಗಾಗಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ, ಒಡಕು ಬಂದಿದೆ. ಮುಖ್ಯಮಂತ್ರಿಯವರ ಬದಲಾವಣೆಯೂ ಆಗಬಹುದು. ಡಿ.ಕೆ.ಶಿವಕುಮಾರ್ ಅವರೇ ಸಿಎಂ ಬದಲಾವಣೆಯ ಸುಳುಹು ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ದೊಡ್ಡ ಬದಲಾವಣೆಗಳನ್ನು ಜನರು ನಿರೀಕ್ಷೆ ಮಾಡಬಹುದು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರಿಂದ ಅನುಭವದ ಆಧಾರದಲ್ಲಿ ಈ ಬಗ್ಗೆ ಹೇಳಿದ್ದಾರೆ ಎಂದರು.

ಹೊಸ ವರ್ಷದಲ್ಲಿ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗಲಿ. ಕಳೆದ ಏಳು ತಿಂಗಳಿಂದ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮರು ಚಾಲನೆ ದೊರೆಯಲಿ ಎಂದು ಆಶಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post