ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆದ ಅಖಿಲ ಹವ್ಯಕ ಮಹಾಸಭೆಯ 80ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಕಜೆಯವರು, ವಿಶ್ವಹವ್ಯಕ ಸಮ್ಮೇಳನದ ಪೂರ್ವಭಾವಿಯಾಗಿ ಹವ್ಯಕ ನ್ಯಾಯವಾದಿಗಳ ಸಮಾವೇಶ, ಹವ್ಯಕ ಮಹಿಳಾ ಸಮಾವೇಶ, ಹವ್ಯಕ ಉದ್ಯಮಿಗಳ ಸಮಾವೇಶ, ಹವ್ಯಕ ಸಂಗೀತ ಉತ್ಸವ, ಹವ್ಯಕ ಯಕ್ಷಗಾನ ಉತ್ಸವ, ಹವ್ಯಕ ವೈದೀಕ ಸಮಾವೇಶ, ಗಾಯತ್ರೀ ಮಹೋತ್ಸವ, ಸಂಸ್ಕಾರೋತ್ಸವ, ಹವ್ಯಕ ಸಾಹಿತ್ಯ – ಭಾಷಾ ಸಮಾವೇಶ, ಕ್ರೀಡೋತ್ಸವ, ಹವ್ಯಕ ಹೈನುಗಾರರ ಸಮಾವೇಶ ಮುಂತಾದವುಗಳು ವರ್ಷಪೂರ್ತಿ ನಡೆಯಲಿದ್ದು, ಸಮಾಜವನ್ನು ಆ ಮೂಲಕ ಜಾಗೃತಗೊಳಿಸಲಾಗುವುದು ಎಂದರು.
ಹವ್ಯಕ ಸಮಾಜ ಜನಸಂಖ್ಯಾದೃಷ್ಟಿಯಲ್ಲಿ ಅತಿಚಿಕ್ಕ ಸಮಾಜವಾದರೂ, ನಾವು ಸಂಘಟಿತವಾದರೆ ಎಲ್ಲವೂ ಸಾಧ್ಯ. ಸಂಘಟನೆಗೆ ಅದ್ಭುತವಾದ ಶಕ್ತಿಯಿದ್ದು, ಇನ್ನಷ್ಟು ಸಂಘಟಿತವಾಗುವ ಮೂಲಕ ಸಮಾಜವನ್ನು ಸಶಕ್ತವಾಗಿಸೋಣ ಎಂದು ಕರೆ ನೀಡಿದರು.
ಅಡಿಕೆ ಎಲೆಚುಕ್ಕಿ ರೋಗ: ಅಡಿಕೆ ಹವ್ಯಕರ ಪಾರಂಪರಿಕ ಕೃಷಿಯಾಗಿದ್ದು, ಪ್ರಸ್ತುತ ಅಡಿಕೆ ಎಲೆಚುಕ್ಕಿ ರೋಗ ಕೃಷಿಕರನ್ನು ಬಾಧಿಸುತ್ತಿದೆ. ಸಮಾಜದ ಕಷ್ಟಕ್ಕೆ ಮಹಾಸಭೆ ಸರ್ವದಾ ಸ್ಪಂದಿಸಲಿದ್ದು, ಹವ್ಯಕ ಕೃಷಿಕರ ಸಮಾವೇಶವನ್ನು ಆಯೋಜಿಸಿ, ಕೃಷಿಕರ ಜೊತೆಗೆ ಕೃಷಿ ವಿಜ್ಞಾನಿಗಳ ಸಂವಾದವನ್ನು ನಡೆಸಿ ಸಮಕಾಲೀನ ಸವಾಲುಗಳಿಗೆ ಉತ್ತರಕಂಡುಕೊಳ್ಳಲು ಪ್ರಯತ್ನಿಸೋಣ ಎಂದರು.
ಹವ್ಯಕ ಮಹಾಸಭೆಯ ಸಮಾಜಮುಖೀ ಕಾರ್ಯವನ್ನು ಗುರುತಿಸಿ ಮಂಜುನಾಥ ಬಿಲ್ಲವ ಅವರು ಭಟ್ಕಳ ಸಮೀಪ ದುರ್ಗಾಪರಮೇಶ್ವರೀ ದೇವಾಲಯ ಸಹಿತವಾದ ಸುಮಾರು ಒಂದು ಎಕರೆ ಜಾಗವನ್ನು ದಾನರೂಪದಲ್ಲಿ ನೀಡಿದ್ದು, ಇಲ್ಲಿ ನವರಾತ್ರಿ ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಯೋಜಿಸಲಾಗುವುದು ಎಂದರು.

ಡಾ.ಕಜೆ 9ನೆಯ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆ
ನೂತನ ಆಡಳಿತ ಮಂಡಳಿ:
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















