ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕುದುರೇಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ #H D Kumaraswamy ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸುವುದಿಲ್ಲ, ಆದರೆ ಕೆಐಓಸಿಎಲ್ #KIOCL ಈ ಹಿಂದೆ ಗಣಿಗಾರಿಕೆ ನಡೆಸುವಾಗ ಸರಿಪಡಿಸಲು ಸಾಧ್ಯವೇ ಆಗದಷ್ಟು ಪರಿಸರ ಹಾನಿ ಮಾಡಿದೆ, ಪರಿಸರ ಹಾನಿಯ ಮೊತ್ತ ಸೇರಿದಂತೆ 1400 ಕೋಟಿ ರೂ. ಬಾಕಿ ಕಟ್ಟಿಲ್ಲ. ತನ್ನ ತಪ್ಪು ಸರಿಪಡಿಸಿಕೊಳ್ಳಲು ತಯಾರಿಲ್ಲದ ಕಂಪನಿಗೆ ಮತ್ತಷ್ಟು ಪರಿಸರ ಹಾನಿ ಮಾಡಲು ಬಿಡಬೇಕೆ ಎಂದು ಪ್ರಶ್ನಿಸಿದ್ದಾರೆ.

Also read: ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿವಿ | ಫೆ.5ರಂದು ತಾಲೂಕು ಮಟ್ಟದ ಕೃಷಿ ಮೇಳ
ಕೇಂದ್ರ ಉನ್ನತಾಧಿಕಾರ ಸಮಿತಿ (ಸಿ.ಇ.ಸಿ.) ವರದಿಯಲ್ಲಿ ಹಾಗೂ 13ನೇ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನೀಡಿರುವ 3ನೇ ವರದಿಯಲ್ಲೂ ಕೆಐಓಸಿಎಲ್ ಪರಿಸರಕ್ಕೆ ಮಾಡಿರುವ ಹಾನಿಯ ಬಗ್ಗೆ ಸ್ಪಷ್ಟವಾಗಿ ಉಲ್ಲೇಖವಿದೆ. ಕಂಪನಿ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಸೂಕ್ತ ಅನುಮತಿ ಪಡೆಯದೇ ನಿಯಮ ಉಲ್ಲಂಘಿಸಿದೆ. ಮಾಡಿರುವ ತಪ್ಪು ಸರಿಪಡಿಸಿಕೊಂಡು, ದಂಡ ಪಾವತಿಸಿ ಎಂದು ಹೇಳಿದರೆ ಅದು ಅಭಿವೃದ್ಧಿಗೆ ಅಡ್ಡಿ ಮಾಡುವ ರಾಜಕೀಯ ಆಗುತ್ತದೆಯೇ ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.

ಎಚ್.ಎಂ.ಟಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಕೊಡಬೇಕೆ?
ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಜಮೀನು ಮಂಜೂರಾತಿಯ ಬಗ್ಗೆಯೇ ಅನುಮಾನವಿದೆ. ಎಚ್.ಎಂ.ಟಿ. ತನಗೆ ಮಂಜೂರಾಗಿದೆ ಎಂದು ಒದಗಿಸಿರುವ ದಾಖಲೆಯಲ್ಲಿ ಸರ್ವೆ ನಂಬರ್ ಮತ್ತು ಮಂಜೂರಾದ ದಿನಾಂಕವೂ ಇಲ್ಲ. 443 ಎಕರೆ ಭೂಮಿ ಮಂಜೂರಾತಿ ಬಗ್ಗೆ ಅಥವಾ ಅರಣ್ಯೇತರ ಉದ್ದೇಶಕ್ಕೆ ಸರ್ಕಾರಿ ಆದೇಶ ಆಗಿರುವ ಯಾವುದೇ ಗೆಜೆಟ್ ಅಧಿಸೂಚನೆ ಇಲ್ಲ. ಹೀಗಿದ್ದೂ ಪ್ರಸ್ತುತ ಮುಚ್ಚಿಹೋಗಿರುವ ಎಚ್.ಎಂ.ಟಿ. ಅರಣ್ಯ ಜಮೀನನ್ನು ಖಾಸಗಿ ಬಿಲ್ಡರ್ ಗಳು ಸೇರಿದಂತೆ ಹಲವು ಕಂಪನಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದೆ. ಎಚ್.ಎಂ.ಟಿ.ಗೆ ರಿಯಲ್ ಎಸ್ಟೇಟ್ ದಂಧೆ ನಡೆಸಲು ಸರ್ಕಾರ ಅವಕಾಶ ಕೊಡಬೇಕೇ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ, #HMT ಮತ್ತು ಕೆ.ಐ.ಓ.ಸಿ.ಎಲ್. ವಿಚಾರದಲ್ಲಿ ಆರೋಪ ಮಾಡುವುದನ್ನು ಬಿಟ್ಟು, ರಾಜ್ಯದ ಹಿತದ ಬಗ್ಗೆಯೂ ಚಿಂತಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post