ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಧಿಕಾರಿಗಳಿಂದ ವಸೂಲಿ ಆರೋಪ ಎದುರಿಸುತ್ತಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ 7 ಅಧಿಕಾರಿಗಳು ಬರೆದಿರುವ ದೂರಿನ ಪತ್ರದ ಸೃಷ್ಟಿಕರ್ತರು “ನಿಮ್ಮ ಬ್ರದರ್ರೋ”? ಎಂದು ಕೆಣಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ಸಿದ್ದರಾಮಯ್ಯ ಅವರನ್ನು ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಕಾಲೆಳೆದಿದ್ದಾರೆ. ಅಲ್ಲದೆ, #YstTax #CashForPosting ಹ್ಯಾಷ್ ಟ್ಯಾಗ್ ಹಾಕಿ ಟಾಂಗ್ ನೀಡಿದ್ದಾರೆ.

Also read: ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ | ಪೊಲೀಸ್ ತನಿಖೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ
ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದು ಹಾಲಿ ಮುಖ್ಯಮಂತ್ರಿಗೆ ಮಾಜಿ ಮುಖ್ಯಮಂತ್ರಿ ಅವರು ಚಾಟಿ ಬೀಸಿದ್ದಾರೆ.

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? ಎಂದು ಎಚ್ಚರಿಕೆ ನೀಡಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post