ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬ್ಯಾಗ್‌ನಲ್ಲಿ ಸ್ಫೋಟಕ #Explosive ವಸ್ತು ಇರಿಸಿಕೊಂಡಿದ್ದ ಆರೋಪದ ಮೇರೆಗೆ ಹೋಟೆಲ್‌ನ ಕೆಲಸಗಾರನೊಬ್ಬನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಗಿಲು ಮುಖ್ಯರಸ್ತೆಯ ಬೆಳ್ಳಳ್ಳಿ ನಿವಾಸಿ ಅಬ್ದುಲ್ ರೆಹಮಾನ್ (23) ಬಂಧಿತ. ಈ ಸಂಬಂಧ ಸಂಪಿಗೆಹಳ್ಳಿ ಠಾಣೆ ಪಿಎಸ್‌ಐ ಕುಪೇಂದ್ರ ಅವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಸ್ಫೋಟಕ ಅಧಿನಿಯಮ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also read: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು
ಘಟನೆ ಹಿನ್ನೆಲೆ
ಥಣಿಸಂದ್ರ ಮುಖ್ಯರಸ್ತೆಯ ಶ್ರೀದೇವಿ ವೈಭವ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿದ್ದ ಆರೋಪಿ ಅಬ್ದುಲ್‌ನನ್ನು ಆಧಾರ್ ಕಾರ್ಡ್ ಕೊಡುವಂತೆ ಹೋಟೆಲ್ ಮಾಲೀಕರು ಕೇಳಿದ್ದರು. ಕೊಡುವುದಾಗಿ ಹೇಳಿ 2 ದಿನ ಕಳೆದರೂ ಆಧಾರ್ ಕೊಟ್ಟಿರಲಿಲ್ಲ. ಹೀಗಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಶೆಡ್‌ನಲ್ಲಿದ್ದ ಆರೋಪಿಯ ಬ್ಯಾಗ್ ಪರಿಶೀಲಿಸಿದಾಗ ಕೆಂಪು ಬಣ್ಣದ ಬಾಲ್ ಆಕಾರದ ಸ್ಫೋಟಕ ವಸ್ತು ಪತ್ತೆಯಾಗಿದೆ. ಹೋಟೆಲ್ ಮಾಲೀಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆತನ ಬಳಿಯಿದ್ದ ಪ್ಲಾಸ್ಟಿಕ್ ಬಣ್ಣದ ಬ್ಯಾಗ್ ಪರಿಶೀಲಿಸಿದಾಗ ಕೆಂಪು ಬಣ್ಣದ ಚೆಂಡಿನಂತ ವಸ್ತುವಿನ ಮೇಲೆ ಬತ್ತಿಗಳು ಕಂಡು ಬಂದಿವೆ. ಈ ಬಗ್ಗೆ ಆತನನ್ನು ಪ್ರಶ್ನಿಸಿದಾಗ ತಡವರಿಸಿ ಅದು ಸ್ಫೋಟಕ ವಸ್ತು ಎಂದು ಹೇಳಿದ್ದಾನೆ. ಸ್ಫೋಟಕ ಇರಿಸಿಕೊಳ್ಳಲು ಲೈಸೆನ್ಸ್ ಇದೆಯೇ ಎಂದು ಕೇಳಿದಾಗ ಇಲ್ಲ ಎಂದಿದ್ದಾನೆ. ತಕ್ಷಣ ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post